ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್​ಗೆ 'ಕನ್ನಡ ಚಂದ್ರ' ಪ್ರಶಸ್ತಿ ಪ್ರದಾನ

Kannada Chandra
Published on

ಬೆಂಗಳೂರು: ಕನ್ನಡ ಅಭಿವೃದ್ಧಿ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ರಾಜಭವನದ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ಇಂದು 'ಕನ್ನಡ ಚಂದ್ರ' ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಗುರುವಾರ ಕನ್ನಡ ಚಂದ್ರ ಪ್ರಶಸ್ತಿ ಪ್ರದಾನ ಸಮಿತಿ, ಸಪ್ನಾ ಬುಕ್ ಹೌಸ್, ಕರ್ನಾಟಕ ವಿಕಾಸ ರಂಗ ವತಿಯಿಂದ ರಾ. ನಂ. ಚಂದ್ರಶೇಖರ್-70 'ಕನ್ನಡ ಡಿಂಡಿಮ' ಪರಿಷ್ಕೃತ ಆವೃತ್ತಿಯ ಲೋಕಾರ್ಪಣೆ ಹಾಗೂ 'ಕನ್ನಡ ಚಂದ್ರ' ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ರಾಜಭವನದ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ಕಾನೂನು ಸಚಿವರಾದ ಮಾಧುಸ್ವಾಮಿ, ಚಲನಚಿತ್ರ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಗೊ.ರು. ಚನ್ನಬಸಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ಅವರು ಕನ್ನಡ ಚಂದ್ರ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾ. ನಂ. ಚಂದ್ರಶೇಖರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net