

ಕುಂಬಳೆ: ಕನ್ನಡ ಸಾಹಿತ್ಯದ ಮೂಲಕ ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸಲು ಸಾಧ್ಯ. ಕನ್ನಡ ಕಟ್ಟುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಬೇಕಾದ ಸ್ಥಿತಿ ಇದೆ ಎಂದು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹೇಳಿದರು.
ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘದ ಆಶ್ರಯದಲ್ಲಿ ಶನಿವಾರ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ 3ನೇ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಾಲೆಯ ಆಡಳಿತ ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ ಜಿಲ್ಲಾ ಸಮಿತಿ ಗೌರವಾಧ್ಯಕ್ಷ ವಿ.ಬಿ.ಕುಳಮರ್ವ, ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಲಲಿತಾಲಕ್ಷ್ಮೀ ಕುಳಮರ್ವ, ಪರಿಷತ್ ಜಿಲ್ಲಾ ಸಮಿತಿ ಅಧ್ಯಕ್ಷ ವಿರಾಜ್ ಅಡೂರು, ಕಾಸರಗೋಡಿನ ಕನ್ನಡ ಭವನ ಪ್ರಕಾಶನದ ಮುಖ್ಯಸ್ಥೆ ಸಂಧ್ಯಾರಾಣಿ, ಪಿಟಿಎ ಅಧ್ಯಕ್ಷ ಉದಯ ಕುಮಾರ್ ಎಂ., ಮುಖ್ಯ ಶಿಕ್ಷಕ ಶ್ಯಾಮ ಭಟ್ ದರ್ಭೆಮಾರ್ಗ, ನಿವೃತ್ತ ಮುಖ್ಯ ಶಿಕ್ಷಕಿ ಶಾರದಾ ಮೊಳೆಯಾರ್ ಎಡನೀರು, ಶಿಕ್ಷಕರಾದ ಪ್ರೇಮಲತಾ, ವಿದ್ಯಾಲಕ್ಷ್ಮೀ, ಶ್ರೀದೇವಿ, ದೇವಿಕಾ, ಸಂಧ್ಯಾ, ಅನುರಾಧಾ, ಪುಷ್ಪಲತಾ, ಶಾರದಾ, ವಿದ್ಯಾ ಹೆಗ್ಡೆ, ಚೈತ್ರಾ, ರಾಜೇಶ್, ಶಿವಾನಂದ, ಹರಿಪ್ರಸಾದ್ ಮೊದಲಾದವರಿದ್ದರು. ಗ್ರಂಥಪಾಲಕಿ ವಿಜಯ ಸುಬ್ರಹ್ಮಣ್ಯ ಸ್ವಾಗತಿಸಿದರು. ಕನಿಹಾ ಮತ್ತು ಪೃಥ್ವೀ ಪ್ರಾರ್ಥಿಸಿದರು. ಶಿಕ್ಷಕಿ ಚಿತ್ರಕಲಾ ದೇವರಾಜ ಆಚಾರ್ಯ ಸೂರಂಬೈಲ್ ನಿರೂಪಿಸಿದರು. ನಿವೃತ್ತ ಶಿಕ್ಷಕಿ ಶಶಿಕಲಾ ಕುಂಬಳೆ ವಂದಿಸಿದರು.
100ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಭಾಗಿ
ಪ್ರಬಂಧ ರಚನಾ ತರಬೇತಿಯಲ್ಲಿ ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಹಾಗೂ ವ್ಯಂಗ್ಯಚಿತ್ರ ರಚನಾ ತರಬೇತಿಯಲ್ಲಿ ವ್ಯಂಗ್ಯಚಿತ್ರಗಾರ ವಿರಾಜ್ ಅಡೂರು ಮಾರ್ಗದರ್ಶನ ನೀಡಿದರು. ಶಿಬಿರದಲ್ಲಿ ಸುಮಾರು 100ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು.