ಜೂ.9ರಂದು ಕನ್ನಡ ಸಂಸ್ಕೃತಿ ಸಂಭ್ರಮ

kannada
Published on

ಕಾಸರಗೋಡು: ಕರ್ನಾಟಕ ಸಂಘ ಅಂಧೇರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಜೂ 9ರಂದು ಮುಂಬೈಯ ಕುರ್ಲಾದಲ್ಲಿರುವ ಬಂಟರ ಭವನದಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ಕೆ.ಇ ರಾಧಾಕೃಷ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಂಧೇರಿ ಕರ್ನಾಟಕ ಸಂಘ ಅಧ್ಯಕ್ಷ ಭಾಸ್ಕರ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪ ಜಿಲ್ಲಾಧಿಕಾರಿ ಕೆ.ಶಶಿಧರ ಶೆಟ್ಟಿ, ಕಾಸರಗೊಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ಪತ್ರಕರ್ತ ವೇಣುಗೋಪಾಲ್ ಶೇಣಿ, ಪೈವಳಿಕೆ ಗ್ರಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಜೆಡ್.ಎ ಕಯ್ಯರ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಹಾಸ್ಯ ಕವಿಗೋಷ್ಠಿ ನಡೆಯಲಿದೆ.

ಸಂಜೆ 5ಕ್ಕೆ ನಡೆಯುವ ಸಮಾರೋಪ ನಡೆಯಲಿದ್ದು, ಎಡನೀರಿನ ಸಚ್ಚಿದಾನಂದ ಶ್ರೀಗಳು ಆಶೀರ್ವಚನ ನೀಡಲಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಸಮಾರಂಭ ಉದ್ಘಾಟಿಸಲಿದ್ದಾರೆ. ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಚಿವ ಎನ್.ಎಸ್.ಬೋಸರಾಜ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಹಿರಿಯ ಸಾಹಿತಿ ಎಸ್.ಜಿ ಸಿದ್ಧಲಿಂಗಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರದೀಪ್‌ಕುಮಾರ್ ಕಲ್ಕೂರ ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net