ಫೆ.12ರಂದು ದುರ್ಗದಲ್ಲಿ ಕನ್ನಡ ಹಬ್ಬ

DSC_0004-02
Published on

ಚಿತ್ರದುರ್ಗ: ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಫೆ.12ರಂದು ಕರುನಾಡ ವಿಜಯಸೇನೆ ಜಿಲ್ಲಾ ಘಟಕದಿಂದ ‘ಕನ್ನಡ ಹಬ್ಬ’ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 10.30ಕ್ಕೆ ಕನಕ ವೃತ್ತದಿಂದ ಓಬವ್ವ ವೃತ್ತದವರೆಗೆ ಭಾವೈಕ್ಯತೆ ಸಂದೇಶ ಸಾರುವ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಸಂಜೆ 6ಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಭಾ ಕಾರ್ಯಕ್ರಮ ಉದ್ಘಾಟಿಸುವರು ಎಂದರು.

ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ ಸೇರಿ ಗಣ್ಯರು ಭಾಗಹಿಸುವರು ಎಂದು ಹೇಳಿದರು.

ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ರಾಜವೀರ ಮದಕರಿನಾಯಕ ಹಾಗೂ ವೈದ್ಯೆ ಡಾ.ನಿಸಾರ್ ಫಾತಿಮಾ ಅವರಿಗೆ ವೀರವನಿತೆ ಒನಕೆ ಓಬವ್ವ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಸೇನೆ ಕಾರ್ಯಾಧ್ಯಕ್ಷ ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಾ ಗೌರಣ್ಣ, ಆರ್.ಮಹೇಶ್, ರೇಣುಕಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net