ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಕನ್ನಡ ಹಬ್ಬ

1 vpt 2
ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ ಕಮರುನ್ನಿಸ, ಎಸ್‌ಡಿಎಂ ಸಿ ಅಧ್ಯಕ್ಷೆ ಲತಾ ಹಾಗೂ ಶಾಲಾ ಮಕ್ಕಳು ಇದ್ದರು.
Published on

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಮುಖ್ಯಶಿಕ್ಷಕಿ ಕಮಲಮ್ಮ ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡು, ನುಡಿ, ಭಾಷೆಯ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಕರೆ ನೀಡಿದರು.

ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಶಾಲಾ ಮಕ್ಕಳು ನಾಡಗೀತೆ ಹಾಗೂ ಕನ್ನಡ ನಾಡು ನುಡಿಯ ಇತರ ಗೀತೆಗಳನ್ನು ಹಾಡಿದರು. ಸಹ ಶಿಕ್ಷಕಿ ಕಮರುನ್ನಿಸ, ಎಸ್‌ಡಿಎಂಸಿ ಅಧ್ಯಕ್ಷೆ ಲತಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net