ಶಿರಸಿಯಲ್ಲಿ ಕನ್ನಡ ಹಬ್ಬ ನವೆಂಬರ್‌ನಲ್ಲಿ

DND
Published on

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ 24ನೇ ಕನ್ನಡ ಸಾಹಿತ್ಯ ಸಮ್ಮೇಳನ ಶಿರಸಿಯಲ್ಲಿ ನವೆಂಬರ್ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಹಿಯ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಿರಸಿಯಲ್ಲಿ 25 ವರ್ಷಗಳ ಬಳಿಕ ಜಿಲ್ಲಾ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗುತ್ತಿದೆ. ಜಿಲ್ಲಾ, ತಾಲೂಕು ಕಸಾಪ ಸಮಿತಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾಹಿತಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು. ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net