

ಅರಕಲಗೂಡು: ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಆಟೋ ಚಾಲಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಡಾ. ರಾಜರತ್ನ ಬಳಗದ ಸಹಯೋಗದಲ್ಲಿ ಶುಕ್ರವಾರ ಪುನೀತ್ ರಾಜ್‌ಕುಮಾರ್ 3ನೇ ಪುಣ್ಯ ಸ್ಮರಣೆ ಹಾಗೂ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಪಟ್ಟಣದ ಕೋಟೆ ಬೀದಿಯಿಂದ ಪುನೀತ್ ರಾಜ್‌ಕುಮಾರ್ ಭಾವಚಿತ್ರ ಹಾಗೂ ಕನ್ನಡ ಬಾವುಟದ ಮೆರವಣಿಗೆ ನಡೆಸಲಾಯಿತು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದ ಆಟೋ ನಿಲ್ದಾಣದಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಪಟ್ಟಣ ಪಂಚಾಯಿತಿ ಸದಸ್ಯ ರಮೇಶ್ ವಾಟಾಳ್, ಡಾ. ರಾಜರತ್ನ ಬಳಗದ ಅಧ್ಯಕ್ಷ ಆಟೋ ವಿಜಯಕುಮಾರ್, ಉಪಾಧ್ಯಕ್ಷ ಆಟೋ ಧರ್ಮ, ಪ್ರಧಾನ ಕಾರ್ಯದರ್ಶಿ ಮನು, ಸಂಚಾಲಕ ನಟರಾಜು, ಕರವೇ ಮುಖಂಡ ಜಿಮ್ ಸೋಮು ಇತರರು ಇದ್ದರು. ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.