

ಕಾಳಗಿ: ಕನ್ನಡ ಭಾಷೆ ಈ ಮಣ್ಣಿನ ಭಾಷೆ, ಅದು ನಮ್ಮ ತಾಯಿ ಭಾಷೆಯಾಗಿದ್ದು, ಇದರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಪ್ರತಿ ವ್ಯವಹಾರದಲ್ಲಿ ಕನ್ನಡವನ್ನು ಬಳಸಿ, ನಾಡಿನ ಏಕೀಕರಣಕ್ಕೆ ಹೋರಾಡಿದ ಮಹಾನೀಯರಿಗೆ ಈ ಮೂಲಕ ಕೃತಜ್ಞತೆ ಸಲ್ಲಿಸೋಣ ಎಂದು ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದ ಶ್ರೀ ಶಾಂತೇಶ್ವರ ವಿದ್ಯಾವರ್ದಕ ಟ್ರಸ್ಟ್ನ ಅಧ್ಯಕ್ಷರಾದ ಷ.ಬ್ರ. ಡಾ.ಶಾಂತ ಸೋಮನಾಥ ಶಿವಾಚಾರ್ಯರು ಹೇಳಿದರು.
ಅವರು ಬುಧವಾರ ಸುವರ್ಣ ರಾಜ್ಯೋತ್ಸವ ನಿಮಿತ್ತ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದ್ವಜಾರೋಹಣ ನೇರವೇರಿಸಿ ಮಾತನಾಡುತ್ತ ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆ ಉಳಿಸುವ ಕೆಲಸ ನಡೆಯುತ್ತಿದೆ. ಮಕ್ಕಳ ಕನ್ನಡ ಭಾಷೆಯನ್ನು ಉಸಿರಾಗಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ನರಸಿಂಹರಾವ ದೇಶಪಾಂಡೆ, ಸಂಸ್ಥೆ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಶಾಲೆ ಮುಖ್ಯಗುರುಗಳು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.