

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2024ನೇ ಸಾಲಿನ ‘ಯಶೋಧರಮ್ಮ ದಾಸಪ್ಪ’ ಪ್ರಶಸ್ತಿಗೆ ರಾಜ್ಯ ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮೀನಾಕ್ಷಿ ಬಾಳಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 15 ಸಾವಿರ ರೂ. ನಗದು ಒಳಗೊಂಡಿದೆ.
25 ರಂದು ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಲಹೆಗಾರ ಹಾಗೂ ಶಾಸಕ ಬಿ.ಆರ್. ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಸಾಹಿತಿ ಬಸವರಾಜ ಗಾರ್ಗಿ, ಪತ್ರಕರ್ತ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಭಾಗವಹಿಸಲಿದ್ದಾರೆ ಎಂದು ಜನಶಕ್ತಿ ಕೇಂದ್ರದ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.