ಕೇರಳದಲ್ಲಿದ್ದು ಕನ್ನಡ ಪತ್ರಿಕೆಗೆ ವರದಿ : ಜೋಸೆಫ್ ಮಥಾಯಿಸ್ ಮೆಚ್ಚುಗೆ : ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಮಹಾಸಭೆ

New Project (59)
Published on

ಕಾಸರಗೋಡು: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ ಇತ್ತೀಚೆಗೆ ನಡೆಯಿತು.

ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಪು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ನಗರಸಭೆ ಅಧ್ಯಕ್ಷ ಅಬ್ಬಾಸ್ ಬೀಗಂ ಉದ್ಘಾಟಿಸಿದರು. ಸಂಘದ ವತಿಯಿಂದ ದುಬೈನ ಉದ್ಯಮಿ, ಹಿರಿಯ ಸಾಂಸ್ಕೃತಿಕ ಸಂಘಟಕ ಜೋಸೆಪ್ ಮಥಾಯಿಸ್ ಅವರನ್ನುಗೌರವಿಸಲಾಯಿತು.

ಜೋಸೆಪ್ ಮಥಾಯಿಸ್ ಮಾತನಾಡಿ, ಕೇರಳ ರಾಜ್ಯದಲ್ಲಿ ಇದ್ದುಕೊಂಡು ಕನ್ನಡ ಪತ್ರಿಕೆಗಳಿಗೆ ವರದಿ ಮಾಡುವ ಇಲ್ಲಿನ ಕನ್ನಡ ಪತ್ರಕರ್ತರ ಕಾರ್ಯ ಶ್ಲಾಘನೀಯ. ಉದ್ಯೋಗದ ಭದ್ರತೆ ಇಲ್ಲದೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಅಭಿಮಾನ ಇಟ್ಟುಕೊಂಡು ತಾವು ಕೆಲಸ ಮಾಡುತ್ತಿದ್ದೀರಿ. ತಮ್ಮ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ನಿಧಿ ಸ್ಥಾಪಿಸುವ ಕಾರ್ಯ ಒಳ್ಳೆಯ ನಿರ್ಧಾರ. ಇದಕ್ಕಾಗಿ ಕೈಜೋಡಿಸುತ್ತೇನೆ ಎಂದರು.

ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಶ್ರೀನಾಥ್, ಅಖಿಲೇಶ್ ನಗುಮುಖಂ, ಟಿ.ಶಂಕನಾರಾಯಣ ಭಟ್, ಚನಿಯಪ್ಪ ನಾಯ್ಕ, ನಿವೃತ್ತ ಉಪ ಜಿಲ್ಲಾಧಿಕಾರಿ ಶಶಿಧರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ್ ತೆಕ್ಕೆಮೂಲೆ ಸ್ವಾಗತಿಸಿದರು. ಕೋಶಾಧಿಕಾರಿ ಶ್ರೀಕಾಂತ್ ನೆಟ್ಟಣಿಗೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net