ಶ್ರೀಮಂತವಾಗಿದೆ ಕನ್ನಡ ನಾಡು, ನುಡಿ

oplus_4194304
ಆಲೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ತಾಲೂಕು ಆಡಳಿತ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
Published on

ಆಲೂರು: ನಮ್ಮ ಕನ್ನಡ ನಾಡು-ನುಡಿ ಸಾವಿರಾರು ವರ್ಷಗಳ ದೀರ್ಘ ಇತಿಹಾಸ ಮತ್ತು ಪರಂಪರೆಯನ್ನು ಒಳಗೊಂಡು ಶ್ರೀಮಂತವಾಗಿದೆ. ಇಂತಹ ಭಾಷೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ಪ್ರತಿಯೊಬ್ಬ ಕನ್ನಡಿಗರದ್ದಾಗಬೇಕು ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಆಧುನಿಕತೆಯ ಕಾಲದಲ್ಲಿ ಜನರು ಅಂಗ್ಲ ಭಾಷೆಯ ವ್ಯಾಮೋಹದಿಂದ ನಮ್ಮ ನಾಡಿನ ಪುರಾತನ ಭಾಷೆಯ ಮೇಲೆ ಕೀಳರಿಮೆ ಬೆಳೆಸಿಕೊಂಡಿರುವುದು ನಮ್ಮತನವನ್ನು ನಾವೇ ನಾಶಗೊಳಿಸಿದಂತೆ. ನಾವು ಉತ್ತಮ ಸಮಾಜವನ್ನು ನಿರ್ಮಾಣಕ್ಕೆ ಮೊದಲು ನಮ್ಮ ಭಾಷೆಯನ್ನು ಸಮಾಜದಲ್ಲಿ ಬಳಸಿದರೆ ಸಾಕು ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಕಂಕಣಬದ್ಧರಾಗಿ ನಿಲ್ಲಬೇಕಾಗಿರುವುದು ಅವಶ್ಯ ಎಂದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಶಿಕ್ಷಕ ಸಾಹಿತಿ ಪರಮೇಶ್ ಮಡಬಲು, ಕನ್ನಡ ಶ್ರೀಮಂತ ಭಾಷೆ. ಇದರ ಉಳಿವಿಗಾಗಿ ಹಲವು ಮಹನೀಯರು ಶ್ರಮಿಸಿದ್ದಾರೆ. ಕನ್ನಡಿಗರಾದ ನಾವು ಅನ್ಯ ಭಾಷೆಗಳ ವ್ಯಾಮೋಹಕ್ಕೆ ಒಳಗಾಗಬಾರದು ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಂದಕುಮಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಧ್ವಜ ಸಂದೇಶ ನೀಡಿದರು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಲಾಯಿತು.

ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಸ್.ಮಂಜೇಗೌಡ, ಬಿಜೆಪಿ ಮಂಡಲ ಅಧ್ಯಕ್ಷೆ ಉಮಾ ರವಿಪ್ರಕಾಶ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಯಣ್ಣ, ಡಾ.ಜಯರಾಜ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲಕೃಷ್ಣ, ದಲಿತ ಮುಖಂಡರಾದ ಬಸವರಾಜ್, ರಂಗಯ್ಯ, ಕರವೇ ತಾಲೂಕು ಅಧ್ಯಕ್ಷ ನಟರಾಜ್, ಉಪಾಧ್ಯಕ್ಷ ನವೀನ್ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net