ಗ್ರಾಮ ಮಟ್ಟದಲ್ಲಿ ಕಸಾಪ ಅರಿವು

30 NMG 01 (4)
Published on

ನಾಗಮಂಗಲ: ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ಬೆಳ್ಳೂರು ಹೋಬಳಿ ಚಾಮಲಾಪುರ ಗ್ರಾಮದ ಸಿ.ಆರ್.ಚಂದ್ರಶೇಖರ್ ಸೋಮವಾರ ಅಧಿಕಾರ ಸ್ವೀಕರಿಸಿದರು.


ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಖರಡ್ಯ ಬಸವೇಗೌಡ ಅವರಿಂದ ಕನ್ನಡ ಬಾವುಟ ಪಡೆಯುವ ಮೂಲಕ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಚಂದ್ರಶೇಖರ್, ಪ್ರತಿ ಗ್ರಾಮ ಮಟ್ಟದಲ್ಲಿ ಕಸಾಪ ಕುರಿತು ಅರಿವು ಮೂಡಿಸುವ ಜತೆಗೆ ಕನ್ನಡ ಅಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರನ್ನು ಗುರುತಿಸಿ ಸದಸ್ಯತ್ವ ಸಂಖ್ಯೆ ಹೆಚ್ಚಿಸುವ ಕೆಲಸ ಮಾಡಲಿದ್ದೇನೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ಕನ್ನಡದ ಶ್ರೀಮಂತಿಕೆ ಇರುವುದು ಗ್ರಾಮೀಣ ಜನರಲ್ಲಿ ಮಾತ್ರ. ಗ್ರಾಮೀಣ ಮಟ್ಟದಿಂದ ಕನ್ನಡವನ್ನು ಕಟ್ಟುವ ಕೆಲಸವಾಗಬೇಕಿದೆ ಎಂದು ಹೇಳಿದರು.


ಕರ್ನಾಟಕ ಜಾನಪದ ಅಕಾಡೆಮಿ ನಿರ್ದೇಶಕ ಅಣೆಚನ್ನಾಪುರ ಮಂಜೇಶ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ವಿ.ಹರ್ಷ, ಡಾ.ಕೃಷ್ಣೇಗೌಡ ಹುಸ್ಕೂರು, ಕನ್ನಡ ಸಂಘದ ಅಧ್ಯಕ್ಷರಾದ ಅಲಮೇಲು, ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರವೀಂದ್ರ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net