ಬಿಜೆಪಿಯಿಂದ ಕನ್ನಡ ಭಾಷೆಗೆ ಉತ್ತೇಜನ : ಪ್ರಧಾನಿ ನರೇಂದ್ರ ಮೋದಿ

modi
Published on

ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಸ್ಥಳೀಯ ಭಾಷೆಗಳಿಗೆ ಹೆಚ್ಚಿನ ಒತ್ತು ನೀಡುವ ಕಾರ್ಯವನ್ನು ಮಾಡಲಿದೆ. ಕನ್ನಡ ಸಮೃದ್ಧ ವಾದ ಭಾಷೆಯಾಗಿದ್ದು, ಕನ್ನಡ ಮುಂದೆ ವಿಸ್ತಾರವಾಗಿ ಬೆಳೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಎನ್‌ಡಿಎ ಮೈತ್ರಿಕೂಟ ಹಮ್ಮಿಕೊಂಡಿದ್ದ ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,

ನಾವು ದೇಶದ ಜನರಿಗೆ ಅಭಿವೃದ್ಧಿಯ ಗ್ಯಾರಂಟಿಯನ್ನು ನೀಡುತ್ತಿದ್ದೇವೆ. ಹಂಪಿ, ಬಾದಾಮಿ, ಮೈಸೂರನ್ನು ಪಾರಂಪರಿಕ ತಾಣವಾಗಿ ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ಗುರುತಿಸುವಂತೆ ಮಾಡಿ ಈ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಇದು ಎನ್‌ಡಿಎ ಹಾಗೂ ಬಿಜೆಪಿ ನಿಮಗೆ ನೀಡುತ್ತಿರುವ ಗ್ಯಾರಂಟಿಯಾಗಿದೆ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ. ಅದಕ್ಕೆ ಶ್ರೀರಾಮಮ ಂದಿರ ನಿರ್ಮಾಣ, ಕಾಶ್ಮೀರದಲ್ಲಿ ಆರ್ಟಿಕಲ್ 370 ತೆರವುಗೊಳಿಸಿರುವುದು, ತ್ರಿವಳಿ ತಲಾಕ್ ನಿಷೇಧಿಸಿರುವುದೇ ಸಾಕ್ಷಿಯಾಗಿದೆ. ನಿಮ್ಮ ಒಂದು ಮತ ನಮಗೆ ಶಕ್ತಿಯನ್ನು ತುಂಬುತ್ತದೆ, ಪ್ರತಿಯೊಬ್ಬರು ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net