ಕನ್ನಡ ನಿತ್ಯೋತ್ಸವ ಪ್ರಶಸ್ತಿ ಪ್ರದಾನ

Award (1)
Published on

ಬೆಂಗಳೂರು: ಕಳೆದ ಮೂವತ್ತು ವರ್ಷಗಳಿಂದ ಆದರ್ಶ ಸುಗಮ ಸಂಗೀತ ಅಕಾಡೆಮಿ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಪ್ರಸಿದ್ಧಿ ಗಳಿಸಿದೆ. ಅಕಾಡೆಮಿ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ರಾಜ್ಯಾದ್ಯಂತ ಉತ್ತಮ ಹೆಸರು ಗಳಿಸಿರುವುದು ಶ್ಲಾನೀಯ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯ ವೈ.ಕೆ ಮುದ್ದುಕೃಷ್ಣ ಪ್ರಶಂಶಿಸಿದರು.

ಆದರ್ಶ ಸುಗಮಸಂಗೀತ ಅಕಾಡೆಮಿ ಭಾನುವಾರ ಆಯೋಜಿಸಿದ್ದ ಕನ್ನಡ ನಿತ್ಯೋತ್ಸವ ಕಾರ್ಯಕ್ರಮ ಹಾಗೂ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ನಿತ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಸುಗಮ ಸಂಗೀತ ಕಲಾವಿದೆ ಮಾಲತಿ ಶರ್ಮ ಮಾತನಾಡುತ್ತಾ, ಸಿ.ಅಶ್ವಥ್​ ಅವರೇ ಉದ್ಘಾಟಿಸಿದ ಆದರ್ಶ ಸುಗಮ ಸಂಗೀತ ಅಕಾಡೆಮಿ ನಾಡಿನಲ್ಲಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಪ್ರಶಸ್ತಿ ಸ್ವೀಕರಿಸಿರುವುದು ಸಂಗೀತ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಸ್ಪೂರ್ತಿ ನೀಡಿದೆ ಎಂದರು.

ಗಾಯಕ ನಗರ ಶೀನಿವಾಸ ಉಡುಪ, ಡಾ.ಅಪ್ಪಗೆರೆ ತಿಮ್ಮರಾಜು ವಿವಿಧ ಗೀತೆಗಳನ್ನು ಹಾಡಿ ರಂಜಿಸಿದರು. ಶ್ರೀರಾಮ್​, ಜಯಕುಮಾರ್​, ಸುದರ್ಶನ್​, ಕಾರ್ತಿಕ್​,ಶಿವಶಂಕರ್​, ಕಿಕ್ಕೇರಿ ಕೃಷ್ಣಮೂರ್ತಿ ಹಾಗೂ ಅಕಾಡೆಮಿಯ ವಿದ್ಯಾರ್ಥಿಗಳಿಂದ ಸುಗಮಸಂಗೀತ ಹಾಗೂ ವಾದ್ಯ ಸಂಗೀತ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net