ಇಂದು ಕನ್ನಡ ನುಡಿ ಚಿಂತನೆ ಕಾರ್ಯಕ್ರಮ

Published on

ಬೇಲೂರು: ಮಂಡ್ಯ ಜಿಲ್ಲೆಯಲ್ಲಿ ಡಿ.20ರಿಂದ 22ರವರೆಗೆ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪಟ್ಟಣದ ವಿದ್ಯಾವಿಕಾಸ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯವಾಣಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ‘ಕನ್ನಡ ನುಡಿ ಚಿಂತನೆ’ ಕಾರ್ಯಕ್ರಮವನ್ನು ನ.29ರಂದು ಬೆಳಗ್ಗೆ 11.30 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಉದ್ಘಾಟಿಸಲಿದ್ದು, ಕಸಾಪ ತಾಲೂಕು ಅಧ್ಯಕ್ಷ ಮಾ.ನಾ.ಮಂಜೇಗೌಡ, ವಿದ್ಯಾ ವಿಕಾಸ ಪದವಿ ಪೂರ್ವ ಕಾಲೇಜಿನ ಟ್ರಸ್ಟಿ ಸೋಫಿಯ, ಕರವೇ(ನಾರಾಯಣಗೌಡ)ಬಣದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಕನ್ನಡ ನಾಡು, ನುಡಿ ಕುರಿತಂತೆ ಉತ್ತಮವಾಗಿ ಮಾತನಾಡುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net