ಕನ್ನಡಿಗರ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸೋಣ

25_11_Mdy_Kannada Rajoythsava
Published on

ಮಂಡ್ಯ: ಹಲವು ಮಹನೀಯರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದಿರುವ ಸಮಗ್ರ ಕರ್ನಾಟಕದ ಐಕ್ಯತೆಯನ್ನು ಕಾಪಾಡಿಕೊಂಡು ಕನ್ನಡಿಗರ ಅಭಿವೃದ್ದಿಗೆ ಶ್ರಮಿಸೋಣ ಎಂದು ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಹೇಳಿದರು.
ನಗರದ ಮಹಾವೀರ ವೃತ್ತದ ಆಟೋ ಚಾಲಕರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.
ಅಖಂಡ ಕರ್ನಾಟಕದಲ್ಲಿ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು. ಆಟೋ ಚಾಲಕರು ಕನ್ನಡವನ್ನು ಉಳಿಸುವಲ್ಲಿ ಮತ್ತು ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ಆಟೋ ಚಾಲಕರು ಒಗ್ಗಟ್ಟಿನ ಹೋರಾಟದ ಮೂಲಕ ತಮ್ಮ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ನಗರಸಭೆಯಿಂದ ದೊರೆಯುವ ಅನುಕೂಲಗಳನ್ನು ಮಾಡಿಕೊಡಲು ಸದಾ ಸಿದ್ದವಿರುವುದಾಗಿ ಭರವಸೆ ನೀಡಿದರು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಹೊಸಹಳ್ಳಿ ಶಿವಕುಮಾರ್, ಪ್ರಜ್ವಲ್, ಮಹದೇವು, ಲೋಕಸರ ಕುಮಾರ್, ಮನೀಷ್, ಹೊಸಹಳ್ಳಿ ಕೃಷ್ಣ, ಕಲಾವಿದರಾದ ಪ್ರಕಾಶ್, ಸಂತೆಕಸಲಗೆರೆ ಬಸವರಾಜು, ಗೊರವಾಲೆ ರುದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net