ಇಂಗ್ಲೀಷ್ ಕಲಿಕೆಗೆ ಅವಕಾಶ ನೀಡುವ ಸಮಾನ ಶಿಕ್ಷಣ ಜಾರಿಗೆ ನಾಪಂಡ ಮುತ್ತಪ್ಪ ಆಗ್ರಹ

1mdkn11 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಸರ್ಕಾರಿ ಶಾಲೆಗಳಲ್ಲಿ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಂಭವನೀಯ ಜೆಡಿ(ಎಸ್) ಅಭ್ಯರ್ಥಿ ನಾಪಂಡ ಮುತ್ತಪ್ಪ ಆಗ್ರಹಿಸಿದರು.

ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಇಂಗ್ಲೀಷ್ ಅನಿವಾರ್ಯತೆಯಿಂದಾಗಿ ಕನ್ನಡ ಮಾಧ್ಯಮ ಶಾಲೆ ಗಳಲ್ಲಿಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದು, ಖಾಸಗಿ ವಿದ್ಯಾಸಂಸ್ಥೆ ಗಳತ್ತ ಮುಖ ಮಾಡಿದ್ದಾರೆ. ಸರ್ಕಾರಿ ಶಾಲೆಗೆ ಬರುವ ಶ್ರಮಿಕ ವರ್ಗದ ಮಕ್ಕಳಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಕಳವಳ ವ್ಯಕ್ತ ಪಡಿಸಿದರು.

ಕನ್ನಡ ಕಲಿಕೆ ಕಡ್ಡಾಯ ಮಾಡಬೇಕು. ಇದರೊಂದಿಗೆ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸಬೇಕು. ಆ ಮೂಲಕ ದೇಶದಲ್ಲಿ ಸಮಾನ ಶಿಕ್ಷಣ ಪದ್ಧತಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಶ್ರಮಿಕ ವರ್ಗದವರು ಅನ್ಯಾಯಕ್ಕೆ ಒಳಗಾಗುತ್ತಾರೆಂದು ಕಳವಳ ವ್ಯಕ್ತ ಪಡಿಸಿ ದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಮಾಡಬೇಕು. ಆ ಮೂಲಕ ಉದ್ಯೋಗದಲ್ಲಿ ಕನ್ನಡದಲ್ಲಿ ಶಿಕ್ಷಣ ಪಡೆದವರಿಗೂ ಮುಕ್ತ ಅವಕಾಶ ಕಲ್ಪಿಸಬೇಕು. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಪಡೆಯುವ ಉದ್ಯೋಗಾವಕಾಶ ಕನ್ನಡಿಗರಿಗೂ ಸಿಗುವಂತೆ ಮಾಡಬೇಕೆಂದು ನಾಪಂಡ ಮುತ್ತಪ್ಪ ಒತ್ತಾಯಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಕಾಂಗ್ರೆಸ್ ಮುಖಂಡ ಡಾ.ಮಂಥರ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಪಾಲ್ಗೊಂಡಿದ್ದರು.

ಸನ್ಮಾನಕ್ಕೆ ಭಾಜನರಾದ ಮುತ್ತಪ್ಪ

ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮದಲ್ಲಿ ಆಟೋ ಚಾಲಕರ ಸಂಘದಿಂದ ಮಂಗಳವಾರ ಆಯೋಜಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಂಭವನೀಯ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರನ್ನು ಸನ್ಮಾನಿಸ ಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net