ನಾಡು-ನುಡಿಗೆ ದೊರಕಲಿ ಮೊದಲ ಆದ್ಯತೆ

ಕನ್ನಡ ರಾಜ್ಯೋತ್ಸವ
ಕನ್ನಡ ರಾಜ್ಯೋತ್ಸವ
Published on

ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
ಕನ್ನಡ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು. ಎಲ್ಲ ಭಾಷೆಗಳನ್ನು ಪ್ರೀತಿಸಿದರೂ ಕನ್ನಡವನ್ನು ಬೆಳೆಸಬೇಕು. ಯುವಕರು ನಾಡು-ನುಡಿಯ ಬಗ್ಗೆ ಹೆಚ್ಚು ಆಸಕ್ತಿ ತೋರಬೇಕು ಎಂದು ಗ್ರಾಪಂ ಸದಸ್ಯ ದೇವರಾಜ್ ಹೇಳಿದರು. ಹೋಬಳಿಯ ಚನ್ನಹಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತ ತಾಯಿ ಭುವನೇಶ್ವರಿ ಹಾಗೂ ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಎಂದರು. ಗ್ರಾಮದ ಮುಖಂಡ ನಂದೀಶ್ ಮಾತನಾಡಿ, ಮನುಷ್ಯ ಹುಟ್ಟಿದ ಮೇಲೆ ಏನಾದರೂ ಸಾಧನೆ ಮಾಡಬೇಕು. ನಾಡಿಗೆ ನಟ ಪುನೀತ್ ರಾಜ್‌ಕುಮಾರ್ ಕೊಡುಗೆ ಅಪಾರವಾಗಿದೆ. ಯುವಪೀಳಿಗೆ ಗುಣಮಟ್ಟದ ಶಿಕ್ಷಣ ಪಡೆಯುವ ಜತೆಗೆ ಗುರು ಹಿರಿಯರಿಗೆ ಗೌರವ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net