ಚಾಲಕರು ಸರ್ಕಾರದ ಸವಲತ್ತು ಪಡೆಯಲು ಸಂಘಟಿತರಾಗಬೇಕು

mysore
Published on

ಮೈಸೂರು: ಜಿಲ್ಲಾ ಪ್ರವಾಸಿ ವಾಹನ ಚಾಲಕರು ಮತ್ತು ಮಾಲೀಕರ ಯೋಗಕ್ಷೇಮಾಭಿವೃದ್ಧಿ ಸಂಘ ಹಾಗೂ ಪ್ರವಾಸಿ ವಾಹನ ಚಾಲಕರ ಸಹಕಾರ ಸಂಘದ ವತಿಯಿಂದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಮಂಗಳವಾರ ಕನ್ನಡ ರಾಜ್ಯೋತ್ಸವ ಮತ್ತು 2024ರ ದಿನದರ್ಶಿ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿತ್ತು.

ಸಾಹಿತಿ ಟಿ. ಸತೀಶ್ ಜವರೇಗೌಡ ಮಾತನಾಡಿ, ನಗರ ಪ್ರದೇಶಗಳಲ್ಲಿ ಜನರು ಪ್ರತಿಷ್ಠೆಗೋಸ್ಕರ ಆಂಗ್ಲಭಾಷೆ ವ್ಯಾಮೋಹಕ್ಕೆ ಒಳಗಾಗುತ್ತಿದ್ದು, ಕನ್ನಡ ಕಡೆಗಣನೆಗೆ ಒಳಗಾಗುತ್ತಿದೆ. ನಗರ ಪ್ರದೇಶಗಳಲ್ಲಿ ಶಿಕ್ಷಣ, ವ್ಯಾಪಾರ, ಬ್ಯಾಂಕಿಂಗ್, ಕೈಗಾರಿಕೆ, ನವೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಪ್ರವಾಸಿ ವಾಹನ ಚಾಲಕರು ಮತ್ತು ಮಾಲೀಕರ ಯೋಗ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ಎಸ್. ಪ್ರಶಾಂಶ್ ಮಾತನಾಡಿ, ವಾಹನ ಚಾಲಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಬದುಕಿಗೆ ಯಾವುದೇ ಭದ್ರತೆಯಿಲ್ಲ. ಹಾಗಾಗಿ ಚಾಲಕರು ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಸಂಘಟಿತರಾಗಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಾಜೇಶ್ ಕೆ. ಜಾದವ್, ಪ್ರಾದೇಶಿಕ ಸಾರಿಗೆ ಇಲಾಖೆಯ ಪಶ್ಚಿಮ ವಲಯದ ಆರ್‌ಟಿಓ ಕೆ. ದೇವಿಕಾ, ಪ್ರವಾಸಿ ವಾಹನ ಚಾಲಕರ ಸಹಕಾರ ಸಂಘದ ಅಧ್ಯಕ್ಷ ಎಸ್. ನಾಗರಾಜು, ಮೈಸೂರು ಟ್ರಾವಲ್ ಅಸೋಸಿಯೇಷನ್ ಅಧ್ಯಕ್ಷ ಜಯಪ್ರಕಾಶ್, ಜೀವಾಧಾರ ರಕ್ತನಿಧಿ ಕೇಂದ್ರದ ಎಸ್.ಇ. ಗಿರೀಶ್,, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಬಾಲಾಜಿ ಸಿಂಗ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net