

ಕುಂದಾಪುರ: ಕುಂದಾಪುರದ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.
ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಧ್ವಜಾರೋಹಣಗೈದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜ ಅವರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ವಿದ್ಯಾರ್ಥಿಗಳಾದ ಅಂಕಿತಾ, ರಜತ್ ಆರ್. ಪೂಜಾರಿ ರಾಜ್ಯೋತ್ಸವದ ಕುರಿತು ವಾತನಾಡಿದರು.
ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿಕಾಸ್ ಮೇಟಿ ಸ್ವಾಗತಿಸಿದರು. ಪ್ರೌಢಶಾಲಾ ಶಿಕ್ಷಕಿ ರೇಖಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಶಿಕ್ಷಕಿ ಸುಜಾತಾ ಗಿರೀಶ್ ವಂದಿಸಿದರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ಎನ್‌ಸಿಸಿ, ಸ್ಕೌಟ್ಸ್, ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.