ಕನ್ನಡಕ್ಕಾಗಿ ದುಡಿದವರಿಗೆ ರಾಜ್ಯೋತ್ಸವ ಪ್ರಶಸ್ತಿ

Kannada Rajyotsava at IIBS College
ಐಐಬಿಎಸ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ
Published on

ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
ಪಟ್ಟಣ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಮುತ್ತುಗದಹಳ್ಳಿಯ ಐಐಬಿಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ತ್ರಿಪುರನೇನಿ ಜಗ್ಗಯ್ಯ ಹಾಗೂ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಅಮರೇಶ್ ವಲ್ಕಂದಿನ್ನಿ ಮತ್ತು ಡಾ. ಬಸವರಾಜ ಕೆ.ಬಿ. ಅವರಿಗೆ ಕರುನಾಡ ಕನ್ನಡ ಕಲಾಸಿರಿ ಬಳಗದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರುನಾಡ ಕನ್ನಡ ಸಿರಿ ಬಳಗದ ಅಧ್ಯಕ್ಷ ಎಂ.ಸಿ ಅಂಬರೀಶ್ ಮಾತನಾಡಿ, ಕನ್ನಡ ನಾಡು-ನುಡಿಯ ಅಭಿವೃದ್ಧಿಗೆ ಶ್ರಮಿಸುವವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಗೌರವಕ್ಕೆ ಭಾಜನರಾದ ಈ ಮೂವರೂ ನೆರೆ ರಾಜ್ಯದಿಂದ ಬಂದವರಾಗಿದ್ದರೂ ಕನ್ನಡ ಕಲಿತು, ಹೊರ ರಾಜ್ಯಗಳಿಂದ ಬಂದು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಕನ್ನಡ ಕಲಿಸುವ ಮೂಲಕ ಪರಭಾಷಿಕರಿಗೆ ಕನ್ನಡ ನಾಡು ನುಡಿಯ ಮಹತ್ವ ಸಾರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net