

ಮೈಸೂರು: ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಕಾಲೇಜಿನಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಲೇಜಿನ ಐಕ್ಯೂಎಸಿ ಮತ್ತು ಕನ್ನಡ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಚೆ ಉದ್ಘಾಟಿಸಿದರು. ಬಳಿಕ ಗಣ್ಯರ ಜತೆ ಸೇರಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕನ್ನಡ ಖ್ಯಾತ ಕವಿಗಳು, ಕರ್ನಾಟಕ ಏಕೀಕರಣ, ಕರ್ನಾಟಕ ಮತ್ತು ಕನ್ನಡ ಭಾಷೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅವರು ತಿಳಿಸಿದರು.
ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಬಿ.ಎಂ.ಸುಬ್ರಾಯ, ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್, ಪ್ರಾಂಶುಪಾಲೆ ಡಾ.ಎಂ.ದೇವಿಕಾ ಇದ್ದರು.