ಕನ್ನಡ ರಾಜ್ಯೋತ್ಸವ: ಬೆಳಗಾವಿಯಲ್ಲಿ 50 ಸಾವಿರ ಮಂದಿಗೆ ಹೋಳಿಗೆ ದಾಸೋಹ

belagavi kannada rajyotsava
Published on

ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಳಗಾವಿಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹೋಳಿಗೆ ದಾಸೋಹ ನಡೆಯುತ್ತಿದೆ.

ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಳಗಾವಿ ಸರ್ದಾರ್ ಮೈದಾನದಲ್ಲಿ 1 ಲಕ್ಷ ಹೋಳಿಗೆಯನ್ನು ತಯಾರಿಸಲಾಗಿದ್ದು, ರಾಜ್ಯೋತ್ಸವ ಮೆರವಣಿಯಲ್ಲಿ ಪಾಲ್ಗೊಳ್ಳುವ ಸುಮಾರು 50 ಸಾವಿರ ಕನ್ನಡಿಗರಿಗೆ ಹೂರಣದ ಹೋಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರಿಗೂ ತಲಾ ಎರಡು ಹೋಳಿಗೆ, ಅನ್ನ-ಸಾರು, ಬದ್ನಿಕಾಯಿ ಪಲ್ಯವನ್ನು ಉಣಬಡಿಸಲಾಗುತ್ತೆ.

ಹೋಳಿಗೆ ದಾಸೋಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಚಿತ್ರನಟ ಸಾಯಿಕುಮಾರ್​ ಚಾಲನೆ ನೀಡಲಿದ್ದಾರೆ. ಬೆಳಗಾವಿ ಜಿಲ್ಲೆ ಯಮಕನಮರಡಿಯ 200 ಬಾಣಸಿಗರು ಅಡುಗೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net