ವರ್ಷವಿಡೀ ಕನ್ನಡದ ಕಾರ್ಯಕ್ರಮ,ಸಚಿವ ಶಿವರಾಜ ತಂಗಡಗಿ ಹೇಳಿಕೆ

kannada rajyotsava celebration koppal minister shivaraj tangadagi flag hosting
ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಸಚಿವ ತಂಗಡಗಿ ಅಭಿನಂದನೆ ಸಲ್ಲಿಸಿದರು. ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ್, ವಿಪ ಸದಸ್ಯೆ ಹೇಮಲತಾ ನಾಯಕ, ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಯಶೋದಾ ವಂಟಗೋಡಿ ಇದ್ದರು.
Published on

ಕೊಪ್ಪಳ:ಕರ್ನಾಟಕ ಸುವರ್ಣ ಸಂಭ್ರಮ ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿರವುದು ನನಗೆ ಹೆಮ್ಮೆ. ನಮ್ಮ ಜಿಲ್ಲೆಯಲ್ಲೂ ಕನ್ನಡ ಜ್ಯೋತಿ ರಥಯಾತ್ರೆ ಸಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ 68ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾಡು, ನುಡಿಗಾಗಿ ಅನೇಕ ಮಹನೀಯರು ಹೋರಾಡಿದ್ದಾರೆ. ಅವರೆಲ್ಲರನ್ನು ಈ ಸಮಯದಲ್ಲಿ ನೆನೆಯಬೇಕಿದೆ.

ಜಿಲ್ಲೆಯಲ್ಲೂ ಅಳವಂಡಿ ಶಿವಮೂರ್ತಿಸ್ವಾಮಿ, ಶಿರೂರು ವೀರಭದ್ರಪ್ಪ, ಶಂಕರಗೌಡ, ಪ್ರಭುರಾಜ ಪಾಟೀಲ್ ಸೇರಿ ಅನೇಕರು ಏಕೀಕರಣಕ್ಕೆ ಕೊಡುಗೆ ನೀಡಿದ್ದಾರೆ.

ನಾಡು-ನುಡಿಗೆ ಸಲ್ಲಿಸಿದ ಸೇವೆ ಪರಿಗಣಿಸಿ ಜಿಲ್ಲೆಯ ಅನೇಕರು ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದು, ಜಿಲ್ಲೆಯ ಕೀರ್ತಿ ಹೆಚ್ಚಿಸಿದೆ ಎಂದರು.

ನ.2ರಂದು ಕನ್ನಡ ಜ್ಯೋತಿ ರಥಯಾತ್ರ ಮುನಿರಾಬಾದ್‌ಗೆ ಆಗಮಿಸಲಿದೆ. ಹೊಸ ಲಿಂಗಪುರ, ಗಿಣಿಗೇರಾ, ಹೊಸಳ್ಳಿ, ಕೊಪ್ಪಳ, ದದೇಗಲ್, ಹಲಗೇರಿ, ಭಾನಾಪುರ, ಬನ್ನಿಕೊಪ್ಪ ಮಾರ್ಗವಾಗಿ ಗದಗ ಜಿಲ್ಲೆಗೆ ತೆರಳಲಿದೆ.

ಮುನಿರಾಬಾದ್‌ನಲ್ಲಿ ಮೆರವಣಿಗೆ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಯಾತ್ರೆಗೆ ಸ್ವಾಗತ ಕೋರಲಾಗುವುದು. ಜಿಲ್ಲೆಯ ಎಲ್ಲ ಜನರು ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ್, ವಿಪ ಸದಸ್ಯೆ ಹೇಮಲತಾ ನಾಯಕ, ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಯಶೋದಾ ವಂಟಗೋಡಿ, ಎಡಿಸಿ ಸಾವಿತ್ರಿ ಕಡಿ, ಎಸಿ ಕ್ಯಾ.ಮಹೇಶ ಮಾಲಗಿತ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net