

ಬೈಲಹೊಂಗಲ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಎಚ್. ಎನ್.ಶಿರಹಟ್ಟಿ ತಿಳಿಸಿದರು.
ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಕುರಿತಾಗಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಂಭ್ರಮದ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಸರ್ಕಾರಿ ನೌಕರರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ವಿವಿಧ ಇಲಾಖೆಗಳಿಗೆ ಸಿದ್ಧತೆಯ ಜವಾಬ್ದಾರಿ ನೀಡಿದರು.
ನ.1ರಂದು ಬೆಳಗ್ಗೆ 9 ಗಂಟೆಗೆ ಪುರಸಭೆ ಆವರಣದಲ್ಲಿ ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಮೆರವಣಿಗೆ ಕನ್ನಡದ ಕಂಪು ಪಸರಿಸಲಿದೆ ಎಂದು ತಿಳಿಸಿದರು.
ಕನ್ನಡಪರ ಹೋರಾಟಗಾರ ಮಹಾಂತೇಶ ತುರಮರಿ ಮಾತನಾಡಿ, ತಾಲೂಕಾಡಳಿತ ಹಾಗೂ ಕನ್ನಡಪರ ಸಂಘಟನೆಗಳೆಲ್ಲ ಒಗ್ಗೂಡಿ ಸಂಭ್ರಮದ ರಾಜ್ಯೋತ್ಸವ ಆಚರಿಸೋಣ. ಕನ್ನಡದ ಹಿರಿಮೆ ಹಾಗೂ ಗರಿಮೆ ಹೆಚ್ಚಿಸಲು ಎಲ್ಲ ಕನ್ನಡ ಸಂಘಟನೆ ಸನ್ನದ್ಧವಾಗಿದೆ ಎಂದರು.
ಶಿವಾನಂದ ಕೋಲಕಾರ ಮಾತನಾಡಿದರು.
ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ, ತಾಪಂ ಇಒ ಸಂಜೀವ ಜುನ್ನೂರ, ಕರವೇ ತಾಲೂಕಾಧ್ಯಕ್ಷ ವಿಠ್ಠಲ ಕಡಕೋಳ, ನಾಗಪ್ಪ ಸಂಗೊಳ್ಳಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.