ಕಾನೂನಿನ ಅರಿವು ಬೆಳೆಸಿಕೊಂಡರೆ ಸಹಕಾರಿ: ಪಿಇಎಸ್ ಕಾನೂನು ಕಾಲೇಜು ಪ್ರಾಂಶುಪಾಲ ಜೆ.ಯೋಗೇಶ್ ಸಲಹೆ

Kannada Rajyotsava celebrations Mandya
Published on

ಮಂಡ್ಯ: ಪ್ರತಿ ನಾಗರಿಕರು ಕಾನೂನಿನ ಬಗ್ಗೆ ಅರಿವು ಮೂಡಿಸಿಕೊಂಡರೆ ಸಹಕಾರಿಯಾಗಲಿದೆ ಎಂದು ಪಿಇಎಸ್ ಕಾನೂನು ಕಾಲೇಜು ಪ್ರಾಂಶುಪಾಲ ಡಾ.ಜೆ.ಯೋಗೇಶ್ ಅಭಿಪ್ರಾಯಪಟ್ಟರು.

ನಗರದ ಪಿಇಎಸ್ ಕಾನೂನು ಕಾಲೇಜು ಆವರಣದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷ ಕಾನೂನು ವಿದ್ಯಾರ್ಥಿಗಳು ಆಯೋಜಿಸಿದ್ದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನಿನ ಅರಿವಿದ್ದರೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಮಾತ್ರವಲ್ಲದೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ಕಾನೂನು ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಗಳು ಬೇರೆ ಕಾಲೇಜು ವಿದ್ಯಾರ್ಥಿಗಳು ಅನುರಿಸುವಂತಾಗಬೇಕು. ಕಾನೂನು ವಿದ್ಯಾರ್ಥಿಗಳು ಇತರರಿಗೆ ಮಾರ್ಗದರ್ಶನ ನೀಡುವಂತಾಗಬೇಕು ಎಂದರು.

ಸಹಾಯಕ ಪ್ರಾಧ್ಯಾಪಕ ಡಾ.ಜಯಕುಮಾರ್, ಕರ್ನಾಟಕ ಏಕೀಕರಣ ಇತಿಹಾಸ ಮತ್ತು ಕಾನೂನು ವಿದ್ಯಾರ್ಥಿಗಳ ಭವಿಷ್ಯ ಕುರಿತು ಉಪನ್ಯಾಸ ನೀಡಿದರು. ಸಹಾಯಕ ಪ್ರಾಧ್ಯಾಪಕಿ ಎಂ.ಎಸ್.ಯಮುನಾವತಿ, ಸಹ ಪ್ರಾಧ್ಯಾಪಕರಾದ ಪ್ರಮೋದ್‌ಕುಮಾರ್, ಸುಭಾಷ್, ಶ್ರೀಕಂಠಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಹಿರಿಯ ಗ್ರಂಥಪಾಲಕ ಶಶಿಧರ್, ವಿದ್ಯಾರ್ಥಿಗಳಾದ ರಕ್ಷಿತ್‌ರಾಜ್, ಭರತ್, ಕಾವ್ಯಾ, ಸಿದ್ದಾರ್ಥ, ಮುರಳೀಧರ್, ಚಂದನ್, ವಿಶ್ವ, ಅಪ್ಪು ಇತರರಿದ್ದರು. ಇದೇ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿದ್ಯಾರ್ಥಿಗಳು ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net