ಏಲಕ್ಕಿ ನಾಡು ಹಾವೇರಿಯಲ್ಲಿ ಕನ್ನಡದ ಕಹಳೆ

1 HVR Kannada
Published on

ಹಾವೇರಿ: ಏಲಕ್ಕಿ ನಾಡು ಹಾವೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಳೆಗಟ್ಟಿತ್ತು. ನಗರದಲ್ಲಿ ಎಲ್ಲೆಲ್ಲೂ ಕನ್ನಡದ ಕಹಳೆ ಮೊಳಗಿತು. ಇಲ್ಲಿನ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸರಿಂದ ಆಕರ್ಷಕ ಪಥ ಸಂಚಲನ, ವಿವಿಧ ಇಲಾಖೆಗಳಿಂದ ಸ್ಥಬ್ದಚಿತ್ರ ಪ್ರದರ್ಶನ, ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು. ಶಾಸಕ ನೆಹರು ಓಲೇಕಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಎಸ್‌ಪಿ ಹನುಮಂತರಾಯ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಪಂ ಸಿಇಒ ಮಹಮ್ಮದ ರೋಷನ್, ಇತರರಿದ್ದರು.
ಆಕರ್ಷಕ ಮೆರವಣಿಗೆ
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ಮೈಲಾರ ಮಹದೇವಪ್ಪ ವೃತ್ತದಿಂದ ಭುವನೇಶ್ವರಿ ದೇವಿ ಮೂರ್ತಿಯ ಮೆರವಣಿಗೆ ಆರಂಭವಾಗಿತ್ತು. ಶಾಲಾ- ಕಾಲೇಜು ಮಕ್ಕಳು, ಶಿಕ್ಷಕರು, ಉಪನ್ಯಾಸಕರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net