ರಾಜ್ಯೋತ್ಸವಕ್ಕೆ ಎಲ್ಲ ಅಧಿಕಾರಿಗಳು ಹಾಜರಾಗಿ

17 nrp 3 kannada
ಎನ್.ಆರ್.ಪುರ ತಾಲೂಕು ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಮಾತನಾಡಿದರು. ಸುರೈಯಾಭಾನು, ಪ್ರೇಮಾ ಶ್ರೀನಿವಾಸ್, ಎಂ.ಪಿ.ಮನು, ಭಾಗ್ಯಾ ನಂಜುಂಡಸ್ವಾಮಿ, ಎಂ.ಮಹೇಶ್, ಜಯಂತಿ ಇತರರಿದ್ದರು.
Published on

ಎನ್.ಆರ್.ಪುರ: ಕನ್ನಡ ರಾಜ್ಯೋತ್ಸವದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಕ್ಕಳು ಭಾಗವಹಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ. ಸವದತ್ತಿ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ಮಾತನಾಡಿ, ಬಸ್ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ವರೆಗೆ ಮೆರವಣಿಗೆ ನಡೆಸುವುದು ಸೂಕ್ತ. ಮೆರವಣಿಗೆಯಲ್ಲಿ ಕನ್ನಡ ಭಾಷೆ, ಜಲ, ನೆಲ ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳಿರಬೇಕು ಎಂದು ಸಲಹೆ ನೀಡಿದರು. ಸಮಾರಂಭದಲ್ಲಿ ಇಬ್ಬರು ಶಿಕ್ಷಕರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಪಪಂ ಅಧ್ಯಕ್ಷೆ ಸುರೈಯಾಭಾನು, ಕರವೇ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಶ್ರೀನಿವಾಸ್, ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ, ತಾಲೂಕು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಜಯಂತಿ, ಎಂ.ಪಿ.ಮನು, ಶೆಟ್ಟಿಕೊಪ್ಪ ಮಹೇಶ್, ವೇಣುಗೋಪಾಲ್, ಶ್ರೀವಲ್ಲಿ, ಆರ್.ವಿ.ಮಂಜುನಾಥ್, ಪಿ.ಪಿ.ಬೇಬಿ, ಮಹೇಶ್, ರಂಗಪ್ಪ, ಗೌಸ್ ಮಹಿಯುದ್ದೀನ್, ಅನಿಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net