ಮೈಸೂರು ಜಿಲ್ಲಾ ಬಿ.ಸಿ.ಎಂ. ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನ.23 ರಂದು ಕನ್ನಡ ರಾಜ್ಯೋತ್ಸವ ಸಮಾರಂಭ

Kannada nadu
Published on

ಮೈಸೂರು: ಮೈಸೂರು ಜಿಲ್ಲಾ ಬಿ.ಸಿ.ಎಂ. ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ-2024 ‘ಕನ್ನಡ ರಾಜ್ಯೋತ್ಸವ’ ಸಮಾರಂಭವನ್ನು ನ.23 ರಂದು ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿಯೂ ಆದ ಸಂಘದ ಅಧ್ಯಕ್ಷ ಬಿ.ಶಿವಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾನಪದ ವಿದ್ವಾಂಸ ಡಾ.ಪಿ.ಕೆ.ರಾಜಶೇಖರ್, ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರಾಘವೇಂದ್ರ, ಸಂಘದ ಗೌರಾವಧ್ಯಕ್ಷ ಎಂ.ರಾಮಯ್ಯ, ಉಪಾಧ್ಯಕ್ಷ ಆರ್.ಮಹದೇವ, ಹಿರಿಯ ವಕೀಲರು ಆಗಿರುವ ಸಂಘದ ಕಾರ್ಯದರ್ಶಿ ಬಿ.ಪಿ.ರಾಜೇಶ್, ಖಜಾಂಚಿ ಕೆ.ರುಕ್ಮಾಂಗದ, ಜಂಟಿ ಕಾರ್ಯದರ್ಶಿ ಜೆ.ಕೆ.ರಮೇಶ್‌ಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net