

ಮೈಸೂರು: ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗದ ಸಂಯುಕ್ತ ಆಶ್ರಯದಲ್ಲಿ ನಗರದ ಎಚ್.ಡಿ.ಕೋಟೆ ರಸ್ತೆಯ ರೈಲ್ವೆ ವರ್ಕ್ ಷಾಪ್‌ನ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ.25 ರಂದು ಬೆಳಗ್ಗೆ 9.30ಕ್ಕೆ ಪ್ರತಿಯೊಬ್ಬರಲ್ಲೂ ಕನ್ನಡ ಪ್ರಜ್ಞೆ ಮೂಡಿಸುವ ಕನ್ನಡವೇ ಸತ್ಯ ಎಂಬ ಹೆಸರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಸಾಹಿತಿ ಬನ್ನೂರು ಕೆ.ರಾಜು ಅವರು ಉದ್ಘಾಟಿಸಲಿದ್ದು, ಶಾಲೆಯ ಮುಖ್ಯ ಶಿಕ್ಷಕಿ ಎಲ್.ಲತಾ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಖ್ಯಾತ ಸಂಖ್ಯಾ ಶಾಸ್ತ್ರಜ್ಞ ಎಸ್.ಜಿ. ಸೀತಾರಾಮ್ ಭಾಗವಹಿಸಲಿದ್ದಾರೆ. ಸುಪ್ರಸಿದ್ಧ ಗಾಯಕರೂ ಆದ ವಿಶ್ರಾಂತ ಇಂಜಿನಿಯರ್ ಉಮಾಪತಿ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಸುಮಧುರವಾದ ಕನ್ನಡ ಗೀತಾಗಾಯನ ಕಾರ್ಯಕ್ರಮ ನಡೆಸಿಕೊಡುವರು.
ಲೇಖಕಿ ಡಾ.ಜಮುನಾರಾಣಿ ಮಿರ್ಲೆ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡುವರು. ಕಾವೇರಿ ಬಳಗದ ಅಧ್ಯಕ್ಷೆ ಎನ್.ಕೆ.ಕಾವೇರಿಯಮ್ಮ ಮತ್ತು ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ. ಸಂಗಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.