ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

vidyavardhaka college
Published on

ಮೈಸೂರು: ನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಕಾಲೇಜಿನಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎ.ಆರ್. ಮದನ್ ಕುಮಾರ್ ಮಾತನಾಡಿ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಪ್ರಯತ್ನಿಸಬೇಕು. ಪ್ರತಿಯೊಬ್ಬರು ಕನ್ನಡವನ್ನು ಬಳಸಿದಾಗಲೇ ಕನ್ನಡ ಬೆಳವಣಿಗೆ ಹೊಂದಲು ಸಾಧ್ಯ. ತಂತ್ರಜ್ಞಾನದ ಈ ಯುಗದಲ್ಲಿ ತಂತ್ರಜ್ಞಾನದ ಜತೆಗೆ ಭಾಷೆಯನ್ನು ಸಹ ಬಳಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಗುಂಡಪ್ಪಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಶೈಲಾ ರಾಮಣ್ಣವರ್, ಕಾಲೇಜಿನ ನಿರ್ವಹಣಾ ಮಂಡಳಿಯ ಅಧ್ಯಕ್ಷ ಟಿ.ನಾಗರಾಜು, ಪ್ರಾಂಶುಪಾಲ ಡಾ.ಎಸ್.ಮರೀಗೌಡ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಧನಂಜಯ ಪಾಲಹಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net