ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಫೋಟೋ ಶೀರ್ಷಿಕೆ 28 ಸಿಆರ್_ಪಿ-2ಎ
Published on

ಚನ್ನರಾಯಪಟ್ಟಣ:ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.


ಕರ್ನಾಟಕದಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ ಹೋರಾಟ ನಡೆಸಿದ ಟಿ.ಎ.ನಾರಾಯಣಗೌಡರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಸಾಪ ಕಚೇರಿಯಿಂದ ಮೆರವಣಿಗೆ ಸಾಗಿ ತಾಲೂಕು ಕಚೇರಿ ಆವರಣದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ತಾಲೂಕು ಘಟಕದ ಅಧ್ಯಕ್ಷ ಮಧು ಕರಡೇವು ಮಾತನಾಡಿ, ಭಾಷೆ, ನಾಡಿನ ಪರವಾಗಿ ಹೋರಾಟ ಮಾಡಿದ್ದಕ್ಕೆ ಬಂಧಿಸಿರುವುದು ಸರಿಯಲ್ಲ. ಅಧ್ಯಕ್ಷರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ರಾಜ್ಯ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಮಾತನಾಡಿ, ನಾಡು, ನುಡಿಗಾಗಿ ಹೋರಾಡಿದವರನ್ನು ನಾಡದ್ರೋಹಿ ಎಂಬಂತೆ ಬಂಧಿಸಿರುವುದು ಖಂಡನೀಯ ಎಂದರು.


ಕರವೇ ಬೆಳಗೊಳ ಹೋಬಳಿ ಘಟಕದ ಅಧ್ಯಕ್ಷ ಮಹೇಶ್, ಪ್ರಚಾರ ಸಮಿತಿ ಅಧ್ಯಕ್ಷ ಧರ್ಮರಾಜ್, ಪ್ರಧಾನ ಕಾರ್ಯದರ್ಶಿ ರವಿ, ಮಹಿಳಾ ಘಟದ ಅಧ್ಯಕ್ಷೆ ದಾಕ್ಷಾಯಿಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net