ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ನಾಮಪತ್ರ ಸಲ್ಲಿಕೆ

5mdka1 - Copy
Published on

ಮಡಿಕೇರಿ: ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಸೋಮವಾರ ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲಗರೊಂದಿಗೆ ಮಡಿಕೇರಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಯಾಗಿರುವ ತಹಸೀಲ್ದಾರ್ ಪಿ.ಎಸ್. ಮಹೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಕಳೆದ ಐದು ವರ್ಷ ನಮ್ಮ ತಂಡ ಕೊಡಗಿನಲ್ಲಿ ಕನ್ನಡದ ತೆರು ಎಳೆದಿದೆ. ರಾಜ್ಯಮಟ್ಟದಲ್ಲಿ ಗಮನ ಸೆಳೆಯುವ ಕಾರ್ಯಕ್ರಮ ಮಾಡಿದ್ದೇವೆ. ಪ್ರಕೃತಿ ವಿಕೋಪ, ಕರೊನಾದಿಂದ ಉದ್ದೇಶಿಸಿತ ಎಲ್ಲ ಕಾರ್ಯ ಚಟುವಟಿಕೆ ಮಾಡಲು ಸಾಧ್ಯವಾಗಲಿಲ್ಲ. ಆ ಹಿನ್ನೆಲೆಯಲ್ಲಿ ಮತ್ತೊಂದು ಅವಧಿಗೆ ಜಿಲ್ಲಾಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಲು ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿ.ಎಸ್. ಲೋಕೇಶ್ ಸಾಗರ್ ಹೇಳಿದರು.

ಜಿಲ್ಲಾ ಸಾಹಿತ್ಯ ಪರಿಷತ್ ಕಟ್ಟಡ ನಿರ್ಮಾಣ, ಹೊಸಬರಿಗೆ ಸಾಹಿತ್ಯ ಚಟುವಟಿಕೆಯಲ್ಲಿ ಅವಕಾಶ ನೀಡುವುದು ಸೇರಿದ್ದಂತೆ ವಿಶ್ವದ ಗಮನ ಸೆಳೆಯುವ ಕಾರ್ಯಕ್ರಮ ಕೊಡಗಿನಲ್ಲಿ ಆಯೋಜಿಸಲಾಗುವುದೆಂದು ಲೋಕೇಶ್ ಸಾಗರ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಮಾದಂಡ ಎಸ್. ಪೂವಯ್ಯ, ವಿರಾಜಪೇಟೆ ತಾಲೂಕು ಅಧ್ಯಕ್ಷ ಮುಲ್ಲೇಂಗಡ ಮಧೂಶ್ ಪೂವಯ್ಯ, ಕುಶಾಲನಗರ ತಾಲೂಕು ಅಧ್ಯಕ್ಷ ಎಂ.ಡಿ. ರಂಗಸ್ವಾಮಿ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಚ್.ಕೆ. ಜವರ, ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net