ಕಸಾಪ ಗೌರವ ಕೋಶಾಧ್ಯಕ್ಷರಾಗಿ ಡಿ.ಆರ್. ವಿಜಯ ಕುಮಾರ್

Kasapa
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕೋಶಾಧ್ಯಕ್ಷರಾಗಿ ಕೆನರಾ ಬ್ಯಾಂಕಿನ ನಿವೃತ್ತ ವಿಭಾಗೀಯ ವ್ಯವಸ್ಥಾಪಕ ಡಿ.ಆರ್.ವಿಜಯ ಕುಮಾರ್ ಅವರು ನೇಮಕಗೊಂಡಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರು ವಿಜಯ ಕುಮಾರ್ ಅವರಿಗೆ ಬುಧವಾರ ಆದೇಶ ಪತ್ರವನ್ನು ಬುಧವಾರ ಹಸ್ತಾಂತರಿಸಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿ, ನಿವೃತ್ತಿ ಬಳಿಕ ವಕೀಲ ವೃತ್ತಿ ಕೈಗೊಂಡಿರುವ ವಿಜಯ ಕುಮಾರ್ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಅಪಾರ ಒಲವು ಹೊಂದಿದ್ದು, ಹಲವು ಅಧ್ಯಯನವನ್ನೂ ನಡೆಸಿದ್ದಾರೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ ಎಂದು ಕಸಾಪ ತಿಳಿಸಿದೆ.

ಆಡಳಿತಾತ್ಮಕ ಮತ್ತು ಕಾನೂನು ಕ್ಷೇತ್ರದಲ್ಲಿ ಅವರು ಹೊಂದಿರುವ ಅಪಾರ ತಿಳಿವಳಿಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತದಲ್ಲಿ ಸ್ಪಷ್ಟತೆ ಹಾಗೂ ಪಾರದರ್ಶಕತೆ ತಂದುಕೊಡಲಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net