ಚಾವುಂಡರಾಯ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಜೂ. 28ರಂದು

Kasapa
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವತಿಯಿಂದ ನೀಡಲಾಗುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭ ಜೂ. 28ರ ಸಂಜೆ 5 ಗಂಟೆಗೆ ಕಸಾಪ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಕನಕಗಿರಿ ಕ್ಷೇತ್ರದ ಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಸಮಾರಂಭ ಉದ್ಘಾಟಿಸಲಿದ್ದು, ಈ ವೇಳೆ ಲೇಖಕಿ ಡಾ. ಪ್ರೀತಿ ಶುಭಚಂದ್ರ ಅವರಿಗೆ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಶ್ರೀ ಧರ್ಮಸ್ಥಳ ಸುರೇಂದ್ರ ಕುಮಾರ್, ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಇತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net