ಕಸಾಪ ದತ್ತಿ ಪುರಸ್ಕಾಕ್ಕೆ ಡಾ.ಎಚ್.ಎಸ್. ಸುರೇಶ್ ಆಯ್ಕೆ

Kasapa Datti
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವತಿಯಿಂದ ನೀಡಲಾಗುವ 2025ನೇ ಸಾಲಿನ ಎ.ಆರ್.ನಾರಾಯಣ ಘಟ್ಟ ಮತ್ತು ಸರೋಜಮ್ಮ ಗಾಂಧಿ ಪುದವಟ್ಟು ದತ್ತಿ ಪುರಸ್ಕಾರಕ್ಕೆ ಕರ್ನಾಟಕ ಸರ್ವೋದಯ ಮಹಾಮಂಡಲದ ಅಧ್ಯಕ್ಷ ಡಾ. ಎಚ್.ಎಸ್. ಸುರೇಶ್ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ವಿದ್ಯಾಲಯ ಸಂಸ್ಥೆಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಹಿರಿಯ ಗಾಂಧಿವಾದಿ ಎ.ಆರ್.ನಾರಾಯಣ ಘಟ್ಟ ಅವರು ಗಾಂಧೀಜಿಯವರ ಜೀವನದ ಆದರ್ಶಗಳನ್ನು ಅಳವಡಿಸಿ ಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿರುವ ನಿಸ್ವಾರ್ಥ ಸಾಧಕರನ್ನು ಗುರುತಿಸಿ ಗೌರವಿಸಲು ಈ ಪುರಸ್ಕಾರ ಸ್ಥಾಪಿಸಿದ್ದಾರೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಪುರಸ್ಕಾರ ಪುರಸ್ಕೃತರಾದ ಡಾ. ಎಚ್.ಎಸ್. ಸುರೇಶ್, ರಾಜ್ಯ ಸರ್ವೊದಯ ಮಹಾಮಂಡಲದ ಅಧ್ಯಕ್ಷರು ಹಾಗೂ ಬರಹಗಾರರು. ರಾಜ್ಯ ಜ್ಯೂನಿಯರ್ ರೆಡ್ ಕ್ರಾಸ್ ಸಲಹೆಗಾರರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಪ್ರಾದೇಶಿಕ ಕೇಂದ್ರದ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಗಾಂಧಿವಾದ ಕುರಿತು ಮಹತ್ವದ ನಾಟಕಗಳನ್ನು ರಚಿಸಿ ರಂಗಭೂಮಿಯ ಮೂಲಕ ಜಾಗೃತಿ ಮೂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net