ಕನ್ನಡ ಸಾಹಿತ್ಯ ಪರಿಷತ್ ಸೇವೆ ಸ್ತುತ್ಯರ್ಹ: ಹರೀಶ್ ಜಿ. ಅಭಿಪ್ರಾಯ

09..
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಕನ್ನಡ ಭಾಷೆ, ಕಲೆ, ಸಂಸ್ಕೃತಿಯ ಸಂವರ್ಧನೆಯೊಂದಿಗೆ ಕನ್ನಡ ಸಾಹಿತ್ಯದ ಸವಿಯನ್ನು ನಾಡಿನ ಮೂಲೆಗೆ ತಲುಪಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸೇವೆ ಸ್ತುತ್ಯರ್ಹ ಎಂದು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಪ್ರಾಧ್ಯಾಪಕ ಹರೀಶ್ ಜಿ. ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಆಶ್ರಯದಲ್ಲಿ ಧರ್ಮತ್ತಡ್ಕ ಯುವಕ ಸಂಘಗ್ರಂಥಾಲಯ, ವಾಚನಾಲಯದ ಸಹಕಾರದೊಂದಿಗೆ ಧರ್ಮತ್ತಡ್ಕದ ಯುವಕ ಸಂಘ ಗ್ರಂಥಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ 111ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ‘ಕನ್ನಡ ಸಾಹಿತ್ಯ ಪರಿಷತ್‌ನ ಉಗಮ ಮತ್ತು ವಿಕಾಸ’ ವಿಷಯದಲ್ಲಿ ಉಪನ್ಯಾಸ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಅಧ್ಯಕ್ಷತೆ ವಹಿಸಿದ್ದರು. ಧರ್ಮತ್ತಡ್ಕ ಯುವಕ ಸಂಘ ಗ್ರಂಥಾಲಯ, ವಾಚನಾಲಯ ಅಧ್ಯಕ್ಷ ಸಿ.ಎಚ್.ರಾಮಮೋಹನ ಚೆಕ್ಕೆ, ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲಾ ಪ್ರಬಂಧಕ ಎನ್.ಶಂಕರನಾರಾಯಣ ಭಟ್, ಪ್ರಾಂಶುಪಾಲ ರಾಮಚಂದ್ರ ಭಟ್.ಎನ್, ಧರ್ಮತ್ತಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಶಶಿಕುಮಾರ್ ಪಿ, ಎಯುಪಿ ಶಾಲೆ ಮುಖ್ಯ ಶಿಕ್ಷಕ ನೇರೋಳು ಮಹಾಲಿಂಗ ಭಟ್, ರವಿಲೋಚನ ಸಿ.ಎಚ್., ರಾಧಾಮಾಧವ ಆಟಿಕುಕ್ಕೆ, ಈಶ್ವರಿ ಡಿ ಉಪಸ್ಥಿತರಿದ್ದರು.

ಮೀಯಪದವು ಹೈಯರ್ ಸೆಕೆಂಡರಿ ಶಾಲಾ ಪ್ರಬಂಧಕಿ ಪ್ರೇಮಾ ಕೆ.ಭಟ್ ತೊಟ್ಟೆತ್ತೋಡಿ, ಪಹಲ್ಗಾಮ್‌ನಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದಿವ್ಯಾ ಎಂ.ವಿ., ಸ್ವಾತಿ ಎನ್, ಆಶಾಲತಾ, ಚಿತ್ರಲತಾ ಡಿ. ಪ್ರಾರ್ಥನೆ ಹಾಡಿದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಪಿ.ರಾಮಚಂದ್ರ ಭಟ್ ಧರ್ಮತ್ತಡ್ಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net