ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ 'ಮನೆ ಮನೆ ವಾಸ್ತವ್ಯ'

Mahesh Joshi
Published on

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಾಗೂ ಜನ ಸಾಮಾನ್ಯರ ಜಾತ್ರೆಯಾಗಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಈ ನಿಟ್ಟಿನಲ್ಲಿ ‘ಮನೆ-ಮನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತು ಎನ್ನುವ ಪರಿಕಲ್ಪನೆಯಲ್ಲಿ ಮುನ್ನಡೆಯುತ್ತಿರುವಾಗ ಈ ಕಾರ್ಯಕ್ರಮದ ಮೂಲಕ ಈಗಾಗಲೇ ನೂರಾರು ಜನರ ಮನೆಗೆ ಭೇಟಿ ನೀಡಿ ಮನೆಗೆ ಪರಿಷತ್ತಿನ ಧ್ಯೇಯ್ಯೋದ್ದೇಶ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ಸಮ್ಮೇಳನದ ಹಿನ್ನೆಲೆಯಲ್ಲಿ ಜ.4 ರಿಂದ 8ರವರೆಗೆ ಸಮ್ಮೇಳನ ನಡೆಯುವ ಸ್ಥಳದ ಸಮೀಪದಲ್ಲಿನ ಅಜ್ಜಯ್ಯನ ಗುಡಿಯ ಸುತ್ತಮುತ್ತಲ ಮನೆಯಲ್ಲಿ ವಾಸ್ತವ್ಯ ಮಾಡಲಾಗುವುದು ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಹಾವೇರಿ ನನ್ನ ತವರೂರು, ಅಲ್ಲಿನ ಯಾವುದೇ ಮನೆಯಲ್ಲಿ ಇದ್ದರೂ ಅದು ತನ್ನ ಮನೆಯೇ ಎಂದು ಭಾವಿಸಿದ್ದೇನೆ. ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕಲು ಇಷ್ಟ ಪಡುವುದರಿಂದ ಯಾವುದೇ ವಿಶೇಷ ಸೌಲಭ್ಯ ಬಯಸದೆ, ಹಾವೇರಿಯ ಜನರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಹತ್ತಿರವಾಗಿರಬೇಕು ಎಂಬ ಅಪೇಕ್ಷೆ ನನ್ನದು. ಹಾಗಾಗಿ ಅಜ್ಜಯ್ಯನ ದೇವಸ್ಥಾನದ ಸುತ್ತಮುತ್ತಲಿನ ಯಾವುದಾದರೂ ಮನೆಯವರು ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲು ಇಚ್ಛಿಸುವವರು ಪರಿಷತ್ತಿಗೆ ಕರೆ ಮಾಡಿ ತಮ್ಮ ವಿಳಾಸ ತಿಳಿಸುವಂತೆ ಮನವಿ ಮಾಡಿದ್ದಾರೆ.

ವಿಳಾಸ: ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು 560018, ಮೊ: 9480628398, ದೂರವಾಣಿ ಸಂಖ್ಯೆ 080-26623584, 26612991 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net