ಜ.5ರಂದು ನಗರದಲ್ಲಿ ಜಾಗೃತಿ ಸಮಾವೇಶ: ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಮಾಹಿತಿ

Kannada Sene press conference mandya
Published on

ಮಂಡ್ಯ: ಒಂದೂವರೆ ದಶಕದಿಂದ ಕನ್ನಡ ನಾಡು, ನುಡಿ, ನೆಲ ಜಲ, ಸಂಸ್ಕೃತಿ ಸಂಬಂಧಿತ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕನ್ನಡ ಸೇನೆ ವತಿಯಿಂದ ಜ.5ರಂದು ನಗರದ ಗಾಂಧಿಭವನದಲ್ಲಿ ಕನ್ನಡ ಜಾಗೃತಿ ಸಮಾವೇಶ, ಹಾಸ್ಯ ಮತ್ತು ಮಿಮಿಕ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ತಿಳಿಸಿದರು.

ಅಂದು ಬೆಳಗ್ಗೆ 10.30ಕ್ಕೆ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅಧ್ಯಕ್ಷತೆ ವಹಿಸುವರು. ಕನ್ನಡ ಜಾಗೃತಿ ಕುರಿತು ಇತಿಹಾಸ ತಜ್ಞ ಮೇಲುಕೋಟೆ ಡಾ.ಶೆಲ್ವಪ್ಪಿಳ್ಳೆ ಅಯ್ಯಂಗಾರ್ ಪ್ರಧಾನ ಭಾಷಣ ಮಾಡುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕದಲೂರು ಉದಯ್ ಮತ್ತು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರಿಗೆ ’ಕನ್ನಡ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಮಹಾಂತಪ್ಪ, ಸೌಭಾಗ್ಯ ಶಿವಲಿಂಗು, ಮಂಜುನಾಥ್ ಬೆಟ್ಟಹಳ್ಳಿ, ಕಮ್ಮನಾಯಕನಹಳ್ಳಿ ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net