

ಕಲ್ಕುಂದ: ಕನ್ನಡಿಗರು ಹೆಚ್ಚಾಗಿ ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದು ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಸನೂರ್ ಅಭಿಪ್ರಾಯ ಪಟ್ಟರು.
ನಂಜನಗೂಡು ತಾಲೂಕು ಬಿಳಿಗೆರೆ ಗ್ರಾಮಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ ಮಾತನಾಡಿದ ಅವರು, ಕನ್ನಡ ನಾಡು- ನುಡಿ ಉಳಿಸಲು ಹಲವು ಕನ್ನಡ-ಸಂಘ ಸಂಸ್ಥೆಗಳು ಹೋರಾಟ ಮಾಡುತ್ತಿವೆ. ಎಲ್ಲರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವತಿಯಿಂದ ರಥಕ್ಕೆ ಪೂಜೆ ಸಲ್ಲಿಸಲಾಯಿತು. ಪಿಡಿಒ ಗಣೇಶ್, ಉಪ ತಹಸೀಲ್ದಾರ್ ಶ್ರೀನಿವಾಸ್, ಗ್ರಾಪಂ ಸದಸ್ಯರಾದ ಚಂದ್ರಶೇಖರ್, ನಂಜುಂಡಸ್ವಾಮಿ, ರಘು, ರತ್ನಾ ಶೇಖರ್, ಪುಟ್ಟಸ್ವಾಮಿ, ಕಾರ್ಯದರ್ಶಿ ಪುಟ್ಟರಾಜು, ರಾಮಚಂದ್ರು, ಬಿ.ಟಿ.ನಾಗರಾಜು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಲೆಕ್ಕಿಗರು, ಶಾಲಾ ಮಕ್ಕಳು, ನಾಡ ಕಚೇರಿ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಪಾಲ್ಗೊಂಡಿದ್ದರು.