ಅ. 9ರಂದು ಅನಿವಾಸಿ ಕನ್ನಡಿಗರ ಸಮ್ಮೇಳನ

20251006_154415
Published on



ಮಂಗಳೂರು : ಮಂಜುನಾಥ ಎಜುಕೇಷನ್ ಟ್ರಸ್ಟ್, ಹೃದಯ ವಾಹಿನಿ ಕರ್ನಾಟಕ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಅಸೋಸಿಯೇಶನ್ ಮಂಗಳೂರು ಸಹಯೋಗದಲ್ಲಿ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅ. 9ರಂದು ನಡೆಯಲಿದೆ. ಅನಿವಾಸಿ ಕನ್ನಡಿಗ ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ ಅವರು ಸಮ್ಮೇಳನಾಧ್ಯಕ್ಷರಾಗಿದ್ದಾರೆ ಎಂದು ಮಂಜುನಾಥ ಎಜುಕೇಷನ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ಪಿ.ಮಂಜುನಾಥ ಸಾಗರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅ. 9ರಂದು ಬೆಳಗ್ಗೆ 9.30ಕ್ಕೆ ಅಖಿಲ ಭಾರತ ಶಿಕ್ಷಕರ ಫೆಡರೇಶನ್‌ನ ಅಧ್ಯಕ್ಷ ಬಸವರಾಜ್ ಗುರಿಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಥಮ ಸಮ್ಮೇಳನಾಧ್ಯಕ್ಷ ಸರ್ವೋತ್ತಮ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಉದ್ಯಮಿ ಅಬ್ದುಲ್ ರಝಾಕ್ ಕೋಟೆ ಹೆಜಮಾಡಿ, ಗುರುಬೆಳದಿಂಗಳು ವೇದಿಕೆಯ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12ಕ್ಕೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಪ್ರೊ. ಪ್ರಭುಲಿಂಗ ದಂಡಿನವರ ಗೋವಾ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಗೌರವ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಪುಸ್ತಕ ಲೋಕಾರ್ಪಣೆ ನೆರವೇತಲಿದೆ ಎಂದು ಅವರು ತಿಳಿಸಿದರು.
ಸಲಹಾ ಸಮಿತಿ ನಿರ್ದೇಶಕ ಶಿವರಾಜ್ ಪಾಂಡೇಶ್ವರ, ಮಹಮ್ಮದ್ ಇಕ್ಬಾಲ್, ರೋನ್ಸ್ ಬಂಟ್ವಾಳ, ಪ್ರತಿಭಾ ಸಾಲ್ಯಾನ್,
ಮಂಜುನಾಥ ರೇವಣ್ಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net