ಮಳಲಿ ಮಸೀದಿ ಹಿಡಿ ಮರಳು ಕೂಡ ಬಿಡಲ್ಲ:ಎಸ್‌ಡಿಪಿಐ ಕರ್ನಾಟಕ ಅಧ್ಯಕ್ಷ ಮಜೀದ್ ಮೈಸೂರ್ ಎಚ್ಚರಿಕೆ

sdpi
Published on
  • ಮಂಗಳೂರು: ಮಳಲಿ ಮಸೀದಿಯ ಒಂದು ಹಿಡಿ ಮರಳು ಮುಟ್ಟಲು ಕೂಡ ಯಾರಿಗೂ ಅವಕಾಶ ನೀಡಲ್ಲ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರ್ ಎಚ್ಚರಿಕೆ ನೀಡಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಹೊವಲಯದ ಕಣ್ಣೂರಿನಲ್ಲಿ ಶುಕ್ರವಾರ ಆಯೋಜಿಸಿದ ಬೃಹತ್ ಜನಾಧಿಕಾರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳಲಿ ಮಸೀದಿಯಲ್ಲಿ ದೇವಸ್ಥಾನ ಹೋಲುವ ರಚನೆ ಕಂಡುಬಂದಿದೆ ಎನ್ನುವ ವಿವಾದ ಆರಂಭವಾಗಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net