ಜಿಲ್ಲಾ ವೃತ್ತಿ ಶಿಕ್ಷಣ ಕಲಿಕೋತ್ಸವದಲ್ಲಿ ಕಾನಸೂರು ಪ್ರೌಢಶಾಲೆ ಪ್ರಥಮ

KALIKOSTVA
Published on

ಸಿದ್ದಾಪುರ: ತಾಲೂಕಿನ ಕಾನಸೂರು ಕಾಳಿಕಾ ಭವಾನಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿ ಗಣೇಶನಗರದ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ವೃತ್ತಿ ಶಿಕ್ಷಣ ಕಲಿಕೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಾದ ಮನೋಹರ ಮಂಜುನಾಥ ನಾಯ್ಕ, ಸಂಕೇತ ವಿದ್ಯಾಧರ ನಾಯ್ಕ ಹಾಗೂ ವಿ. ನಿತಿನ್ ಬೋಡೋ ದ್ರಾವಣ ಸಿಂಪಡಣೆಯ ಪ್ರಾತ್ಯಕ್ಷಿಕೆ ಪ್ರದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕ ಎಂ.ಜಿ. ಪವಾರ ಮಾರ್ಗದರ್ಶನ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net