ಕಂಟನಕುಂಟೆಯಲ್ಲಿ ಮೂಲಸೌಕರ್ಯ ಮರೀಚಿಕೆ

kantanakunte basic needs
Published on

ಪರಿಶಿಷ್ಟರ ಕುಂದು ಕೊರತೆ ಸಭೆಯಲ್ಲಿ ಎಎಸ್ಪಿ ಪುರುಷೋತ್ತಮ್ ಮುಂದೆ ಸಮಸ್ಯೆ ಬಿಚ್ಚಿಟ್ಟ ಗ್ರಾಮಸ್ಥರು


ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಗ್ರಾಮದಲ್ಲಿ ಚರಂಡಿ ಇಲ್ಲ, ಹಲವು ಕುಟುಂಬಗಳಿಗೆ ಮನೆಗಳೇ ಇಲ್ಲ, ಕುಡಿಯುವ ನೀರು ಕೂಡ ಸಮರ್ಪಕವಾಗಿ ಪೂರೈಸುತ್ತಿಲ್ಲ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ಪುರುಷೋತ್ತಮ್ ಬಳಿ ಗ್ರಾಮಸ್ಥರು ಅಲವತ್ತುಕೊಂಡರು.
ಕಸಬಾ ಹೋಬಳಿಯ ಕಂಟನಕುಂಟೆಯಲ್ಲಿ ಶನಿವಾರ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ, ಪಂಗಡದವರ ಕುಂದುಕೊರತೆ ಸಭೆಯಲ್ಲಿ ಹಲವು ಸಮಸ್ಯೆ ಬಗ್ಗೆ ಗ್ರಾಮಸ್ಥರು ಗಮನ ಸೆಳೆದರು. ನಿವಾಸಿಗಳಿಗೆ ವಾಸಕ್ಕೆ ಯೋಗ್ಯ ಮನೆಯಿಲ್ಲ. ಮೂಲ ಸೌಲಭ್ಯ ಮರೀಚಿಕೆಯಾಗಿವೆ ಎಂದು ಬೇಸರಿಸಿದರು.
ಎಎಸ್ಪಿ ಪುರುಷೋತ್ತಮ್, ಜನರ ಸಮಸ್ಯೆ ಆಲಿಸಿದ ಬಳಿಕ ಮೊದಲಿಗೆ ಗ್ರಾಮದ ಬೀದಿಗಳಲ್ಲಿ ಸಂಚರಿಸಿ ಖುದ್ದು ವೀಕ್ಷಿಸಿದರು.
ಇಲ್ಲಿನ ನಿವಾಸಿಗಳ ಎಲ್ಲ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದು ಪರಿಹರಿಸುವ ಪ್ರಯತ್ನ ಮಾಡಲಾಗುವುದು. ಕಾಲನಿಗೆ ಚರಂಡಿ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಮಹಿಳೆಯರು, ಪುರುಷರು ಗಾಮೆರ್ಂಟ್ಸ್, ಇನ್ನಿತರ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಬಯಸಿದರೆ ಕಂಪನಿಗಳಿಗೆ ಶಿಫಾರಸು ಮಾಡಲಾಗುವುದು. ಯುವಕರು ಸ್ವಯಂ ಉದ್ಯೋಗ ಕೈಗೊಂಡು ಸಂಸಾರಕ್ಕೆ ಆಸರೆಯಾಗಬೇಕು. ವ್ಯಾಸಂಗ ಮಾಡಿಕೊಂಡಿರುವವರು ಸಾಲ ಸೌಲಭ್ಯ ಪಡೆದು ಸ್ವಂತ ಬದುಕು ಕಟ್ಟಿಕೊಳ್ಳಬೇಕು ಎಂದು ಪುರುಷೋತ್ತಮ್ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net