

ಕಾರ್ಕಳ: ಕಾಂತಾವರ ಕನ್ನಡ ಸಂಘದ 2020ರ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ.
ಮೊಗಸಾಲೆ ಪ್ರತಿಷ್ಠಾನ ನೀಡುವ ಕಾಂತಾವರ ಲಲಿತಕಲಾ ಪ್ರಶಸ್ತಿಗೆ ಹಿರಿಯ ಸಾಹಿತಿ ಮತ್ತು ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಾಂತಾವರ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರ ದತ್ತಿನಿಧಿಯು ನೀಡುವ ಕಾಂತಾವರ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಸಾಹಿತಿ ಮತ್ತು ಚಿಂತಕ ಟಿ.ಎ.ಎನ್. ಖಂಡಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ತಲಾ ಹತ್ತು ಸಾವಿರ ರೂ.ಗಳ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು, ಡಿಸೆಂಬರ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗುವುದೆಂದು ಸಂಘದ ಕಾರ್ಯಾಧ್ಯಕ್ಷ ನಿರಂಜನ ಮೊಗಸಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.