

ರಾಯಚೂರು: ಬೆಂಗಳೂರಿನ ಶ್ರೀಮಾತಾ ಚಾರಿಟೇಬಲ್ ಟ್ರಸ್ಟ್‌ನಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದವರಿಗೆ ನೀಡಲಾಗುವ ಕಪ್ಪಣ್ಣ ಸಾಂಸ್ಕೃತಿಕ ಯುವ ಪ್ರಶಸ್ತಿಗೆ ನಗರದ ರಂಗಭೂಮಿ ಕಲಾವಿದ ಡಿಂಗ್ರಿ ನರೇಶ್ ಆಯ್ಕೆಯಾಗಿದ್ದಾರೆ.
ರಂಗಭೂಮಿಯಲ್ಲಿ ಸಕ್ರಿಯವಾಗಿರುವ ಡಿಂಗ್ರಿ ನರೇಶ್ ಹಲವಾರು ಸಿನೆಮಾಗಳಲ್ಲಿಯೂ ನಟಿಸುವ ಮೂಲಕ ಹೆಸರುವಾಸಿಯಾಗಿದ್ದಾರೆ. ಜತೆಗೆ ಹಲವಾರು ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಿಸಿಕೊಂಡಿದ್ದಾರೆ.
ಕಪ್ಪಣ್ಣ ಸಾಂಸ್ಕೃತಿಕ ಯುವ ಪ್ರಶಸ್ತಿ ಪುರಸ್ಕೃತ ಡಿಂಗ್ರಿ ನರೇಶ್‌ಗೆ 25 ಸಾವಿರ ರೂ. ನಗದು ಹಾಗೂ ಸ್ಮರಣೀಕೆಯನ್ನು ನೀಡಲಾಗುತ್ತಿದ್ದು, ೆ.13ರಂದು ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ನಿರ್ದೇಶಕ ಟಿ.ಎಸ್.ನಾಗಾಭರಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.