

ಗದಗ: ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪ್ರಶಾಂತ ವರಗಪ್ಪನವರ ನೇತೃತ್ವದಲ್ಲಿ ಕಪ್ಪತ್ತಗುಡ್ಡದಲ್ಲಿ ಬೈಕ್ ರ್ಯಾಲಿ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಈ ಸಂಧರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಪಠಿಸಲಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಸಂವಿಧಾನ ಪೀಠಿಕೆಯನ್ನು ಜನಸಾಮಾನ್ಯರಿಗೆ ಅರ್ಥೈಸಬೇಕು. ಈ ಮೂಲಕ ಜನ ಸಾಮಾನ್ಯರು ಸಹ ಸಂವಿಧಾನವನ್ನು ಅರಿತು ತಮ್ಮ ಹಕ್ಕು ಕರ್ತವ್ಯಗಳನ್ನು ಪಾಲಿಸಬೇಕು. ಸಂವಿಧಾನ ದತ್ತವಾಗಿ ಇರುವ ಹಕ್ಕುಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಜನ ಸಾಮಾನ್ಯರೆಲ್ಲರೂ ಒಂದು ಎಂಬ ಭ್ರಾತೃತ್ವ ಭಾವನೆ ಮೂಡಿಸುವ ಆಶಯವನ್ನು ಸಂವಿಧಾನ ಜಾಗೃತಿ ಕಾರ್ಯಕ್ರಮ ಒಳಗೊಂಡಿದೆ.