28ರಂದು ಕಾಪು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

kapu light house
Published on

ಪಡುಬಿದ್ರಿ: ಕಾಪು ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಅಯ್ಕೆಗೆ ಅ.28ರಂದು ಬೆಳಗ್ಗೆ ನಾಮಪತ್ರ ಸಲ್ಲಿಕೆ ಬಳಿಕ ಮಧ್ಯಾಹ್ನ 3 ಗಂಟೆಗೆ ಚುನಾವಣೆ ನಡೆಯಲಿದೆ.

ಪುರಸಭೆಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. 23 ಸದಸ್ಯ ಬಲದ ಕಾಪು ಪುರಸಭೆಯಲ್ಲಿ ಕಾಂಗ್ರೆಸ್ 12 ಮತ್ತು ಬಿಜೆಪಿ 11 ಸ್ಥಾನ ಹೊಂದಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಂಸದೆ ಹಾಗೂ ಶಾಸಕರನ್ನೊಂದಿರುವ ಬಿಜೆಪಿ ಬಹುಮತ ಪಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಅನಿಲ್‌ಕುಮಾರ್ ಸ್ಪರ್ಧಿಸುವುದು ಅಂತಿಮವಾಗಿದೆ. ಆದರೆ ಸೂಕ್ತ ಬಹುಮತವಿಲ್ಲದಿದ್ದರೂ ಸ್ಪರ್ಧಿಸಲೇ ಬೇಕಿರುವ ಕಾರಣ ಕಾಂಗ್ರೆಸ್‌ನಿಂದ ಶಾಬು ಸಾಹೇಬ್, ಸುಲೋಚನಾ ಬಂಗೇರ, ಅಶ್ವಿನಿ ಅವರಲ್ಲಿ ಯಾರಾದರೊಬ್ಬರು ನಾಮಪತ್ರ ಸಲ್ಲಿಸಲಿದ್ದಾರೆ. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನ ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಗಳಿಲ್ಲದ ಕಾರಣ ಕಾಂಗ್ರೆಸ್‌ಗೆ ಅನಾಯಾಸವಾಗಿ ಒಲಿಯಲಿದೆ. ಪ್ರಥಮ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಸೌಮ್ಯಾ ಮತ್ತು ಮಾಲಿನಿ ಅವರಲ್ಲಿ ಯಾರಾದರೊಬ್ಬರು ಉಪಾಧ್ಯಕ್ಷರಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net