ಕಾಪು ಕ್ಷೇತ್ರಕ್ಕೆ ಹೊರೆಕಾಣಿಕೆ ಸಮರ್ಪಣೆ

New Project (34)
Published on

ಮೂಲ್ಕಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಪ್ರಯುಕ್ತ ಶನಿವಾರ ಜಾಗತಿಕ ಬಂಟರ ಸಂಘದ ಒಕ್ಕೂಟದ ವತಿಯಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ಮೂಲ್ಕಿಯ ಜಾಗತಿಕ ಬಂಟರ ಸಂಘದ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಬಳಿ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪದಾಧಿಕಾರಿಗಳಾದ ಡಾ.ಪಿ.ವಿ.ಶೆಟ್ಟಿ, ಚಂದ್ರಹಾಸ ಶೆಟ್ಟಿ ಬಂಟ್ವಾಳ, ಶಶಿಧರ ಶೆಟ್ಟಿ ಇನ್ನಂಜೆ, ದೇವಪ್ಪ ಶೇಖ, ಜಯಕರ ಶೆಟ್ಟಿ ಇಂದ್ರಾಳಿ, ಮನೋಹರ್ ಶೆಟ್ಟಿ ತೋನ್ಸೆ, ಡಾ.ಪಿ.ವಿ.ಶೆಟ್ಟಿ, ಚಂದ್ರಹಾಸ ಶೆಟ್ಟಿ ಬಂಟ್ವಾಳ, ಸಂತೋಷ್ ಕುಮಾರ್ ಹೆಗ್ಡೆ ಎಳತ್ತೂರು, ಪುರುಷೋತ್ತಮ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಕೊಲ್ಲಾಡಿ ಬಾಲಕೃಷ್ಣ ರೈ, ಅಮರೇಶ್ ಶೆಟ್ಟಿ ತಿರುವಾಜೆ, ಸಂತೋಷ್ ಶೆಟ್ಟಿ ಕಾವು, ಶರತ್ ಶೆಟ್ಟಿ ಮುಂಡ್ಕೂರು, ಶ್ರೀಶ ಸರಾಫ್ ಐಕಳ, ಜಗದೀಶ್ ಶೆಟ್ಟಿ, ಇರಾ ಸ್ವರಾಜ್ ಶೆಟ್ಟಿ ಮುಂಡ್ಕೂರು, ಹರ್ಷರಾಜ್ ಶೆಟ್ಟಿ ಜಿ.ಎಂ.ಮೂಲ್ಕಿ, ಸಾಯಿನಾಥ್ ಶೆಟ್ಟಿ ಮುಂಡ್ಕೂರು, ರತ್ನಾಕರ ಅಡಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net