ಬಪ್ಪನಾಡು- ಮೂಲ್ಕಿ ಒಂಬತ್ತು ಮಾಗಣೆಯಿಂದ ಹೊರೆಕಾಣಿಕೆ

New Project (33)
Published on

ಮೂಲ್ಕಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಶ್ರೀಕ್ಷೇತ್ರ ಬಪ್ಪನಾಡು ಹಾಗೂ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಭಕ್ತವೃಂದದಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಮಾಣಿಲ ಮಠದ ಶ್ರೀ ಮೋಹನದಾಸ ಸ್ವಾಮೀಜಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

ಮೂಲ್ಕಿ ಸೀಮೆಯ ಅರಸ ದುಗ್ಗಣ್ಣ ಸಾವಂತ, ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮೂಲ್ಕಿ ಸೀಮೆಯ ಹೊರೆಕಾಣಿಕೆ ಮೆರವಣಿಗೆ ಸಂಚಾಲಕ ಸುನೀಲ್ ಆಳ್ವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಜಾಗತಿಕ ಬಂಟರ ಸಂಘ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಮೂಲ್ಕಿ ಮೊಗವೀರ ಸಭಾದ ಸುಜಿತ್ ಸಾಲ್ಯಾನ್, ಕುಶಲ ಭಂಡಾರಿ, ಚಿತ್ತರಂಜನ್ ಭಂಡಾರಿ ಐಕಳಬಾವ, ದಿವಾಕರ ಸಾಮಾನಿ, ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರಿದ್ದರು. ಬಳಿಕ ಬಪ್ಪನಾಡು ದೇವಸ್ಥಾನದಿಂದ ಕಾಪು ಹೊಸ ಮಾರಿಗುಡಿವರೆಗೆ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net